Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರ್ಜರಿಗಾಗಿ ಈಜಿಪ್ಟ್‌ನಿಂದ ಮುಂಬೈಗೆ ಬಂದ...

ಸರ್ಜರಿಗಾಗಿ ಈಜಿಪ್ಟ್‌ನಿಂದ ಮುಂಬೈಗೆ ಬಂದ ಗಜಗಾತ್ರದ ಮಹಿಳೆ

ವಾರ್ತಾಭಾರತಿವಾರ್ತಾಭಾರತಿ11 Feb 2017 1:32 PM IST
share
ಸರ್ಜರಿಗಾಗಿ ಈಜಿಪ್ಟ್‌ನಿಂದ ಮುಂಬೈಗೆ ಬಂದ ಗಜಗಾತ್ರದ ಮಹಿಳೆ

ಮುಂಬೈ, ಫೆ.11: ಕಳೆದ 25 ವರ್ಷಗಳಿಂದ ಗೃಹಬಂಧನದಲ್ಲಿದ್ದ, ವಿಶ್ವದ ಅತ್ಯಂತ ಭಾರದ ಮಹಿಳೆಯಾಗಿರುವ 500 ಕೆಜಿ ತೂಕದ ಈಜಿಪ್ಟ್‌ನ 36ರ ಹರೆಯದ ಇಮಾನ್ ಅಹ್ಮದ್‌ರನ್ನು ತೂಕ ಕಡಿಮೆ ಮಾಡುವ ಚಿಕಿತ್ಸೆಗಾಗಿ ಕೊನೆಗೂ ಭಾರತಕ್ಕೆ ಕರೆತರಲಾಗಿದೆ.

ಈಜಿಪ್ಟ್ ಏರ್ ಪ್ಲೇನ್‌ನಲ್ಲಿ ಭಾರತಕ್ಕೆ ಆಗಮಿಸಿದ ಇಮಾನ್ ಬೆಳಗ್ಗೆ 4 ಗಂಟೆಗೆ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಕಳೆದ 25 ವರ್ಷಗಳಿಂದ ಮನೆ ಬಿಟ್ಟು ಕದಲದ ಇಮಾನ್‌ಗೆ ಶಸ್ತ್ರಚಿಕಿತ್ಸೆ ನಡೆಸುವ ಮೊದಲು ಒಂದು ತಿಂಗಳಕಾಲ ನಿಗಾ ವಹಿಸಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಮುಂಬೈನ ಬರಿಯಾಟ್ರಿಕ್ ಸರ್ಜನ್ ಮುಫಝಲ್ ಲಕ್ಡಾವಾಲಾ ನೇತೃತ್ವದ ವೈದ್ಯರ ತಂಡ ಇಮಾನ್ ಅಹ್ಮದ್ ಚಿಕಿತ್ಸೆಯ ಜವಾಬ್ದಾರಿ ವಹಿಸಿಕೊಂಡಿದೆ.

 ನಮ್ಮ ತಂಡ ಕಳೆದ ಮೂರು ತಿಂಗಳಿಂದ ಇಮಾನ್‌ಗೆ ಚಿಕಿತ್ಸೆ ನೀಡುತ್ತಿದ್ದು, ಈಜಿಪ್ಟ್‌ನ ಅಲೆಕ್ಸಾಂಡ್ರಿಯ ಸಿಟಿಯಿಂದ ಮುಂಬೈಗೆ ಕರೆತರುವ ಮೊದಲು ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ. ಕಳೆದ 25 ವರ್ಷಗಳಿಂದ ಮನೆ ಬಿಟ್ಟು ಕದಲದ ಕಾರಣ ಅತ್ಯಂತ ಅಪಾಯಕಾರಿ ರೋಗಿಯಾಗಿರುವ ಇಮಾನ್‌ರನ್ನು ಈಜಿಪ್ಟ್‌ನಿಂದ ಮುಂಬೈಗೆ ಕರೆ ತಂದಿರುವುದು ದೊಡ್ಡ ಸವಾಲಿನ ಕೆಲಸವಾಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

 ಇಮಾಮ್ ಅಹ್ಮದ್ ಅವರು ತಮ್ಮ ಸಹೋದರಿಯೊಂದಿಗೆ ಶನಿವಾರ ಬೆಳಗ್ಗೆ ಮುಂಬೈಗೆ ಆಗಮಿಸಿದ್ದಾರೆ. ಕಳೆದ 10 ದಿನಗಳಿಂದ ಮುಂಬೈ ವೈದ್ಯರ ತಂಡ ಈಜಿಪ್ಟ್‌ನಲ್ಲಿತ್ತು. ಈಜಿಪ್ಟ್ ವಿಮಾನದಲ್ಲಿ ಸುರಕ್ಷಿತವಾಗಿ ಪ್ರಯಾಣಿಸುವ ಉದ್ದೇಶದಿಂದ ಸ್ಥಳೀಯ ಈಜಿಪ್ಟ್ ಕುಶಲಕರ್ಮಿಗಳು ವಿಶೇಷ ಬೆಡ್‌ನ್ನು ನಿರ್ಮಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ವಿಮಾನದಲ್ಲಿ ಎಲ್ಲ ತುರ್ತು ವೈದ್ಯಕೀಯ ವ್ಯವಸ್ಥೆಗಳನ್ನು ಮಾಡಲಾಗಿತ್ತು.

ಇಮಾನ್ ವಿಮಾನ ನಿಲ್ದಾಣಕ್ಕೆ ಬಂದ ಬಳಿಕ ಸಕಲ ಸೌಲಭ್ಯಗಳಿರುವ ಟ್ರಕ್‌ನಲ್ಲಿ ಸೈಫಿ ಆಸ್ಪತ್ರೆಗೆ ಕರೆ ತರಲಾಗಿದ್ದು, ಆ್ಯಂಬುಲೆನ್ಸ್ ಹಾಗೂ ಪೊಲೀಸ್ ಬೆಂಗಾವಲು ಪಡೆ ಟ್ರಕ್‌ನ್ನು ಹಿಂಬಾಲಿಸಿ ಬಂದವು. ಸೈಫೀ ಆಸ್ಪತ್ರೆಯಲ್ಲಿ ಇಮಾನ್‌ಗೋಸ್ಕರ 2 ಕೋಟಿ ರೂ. ವೆಚ್ಚದಲ್ಲಿ ವಿಶೇಷ, ಪ್ರತ್ಯೇಕ ಕೊಠಡಿಯನ್ನು ನಿರ್ಮಿಸಲಾಗಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X