Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಡಬಲ್...

ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಡಬಲ್ ರೋಲ್ !

# ನಾಯಕ ಪಕ್ಷದ ಸ್ಟಾರ್ ಪ್ರಚಾರಕ, # ಬೆಂಬಲಿಗರಿಂದ ಪಕ್ಷದ ವಿರುದ್ಧ ಪ್ರಚಾರ

ವಾರ್ತಾಭಾರತಿವಾರ್ತಾಭಾರತಿ11 Feb 2017 1:36 PM IST
share
ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಡಬಲ್ ರೋಲ್ !

ಲಕ್ನೋ, ಫೆ.11: ಉತ್ತರ ಪ್ರದೇಶದಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕ ಹಾಗೂ ಸಂಸದ ಯೋಗಿ ಆದಿತ್ಯನಾಥ್‌ ಪಕ್ಷದ ಗೆಲುವಿಗಾಗಿ ಶ್ರಮಿಸುತ್ತಿದ್ದರೆ, ಅತ್ತ ಅವರ ಬೆಂಬಲಿಗರು ಪಕ್ಷವನ್ನು ರಾಜ್ಯದ ಈಶಾನ್ಯ ಭಾಗಗಳಲ್ಲಿ ಸೋಲಿಸಲು ಅಹೋರಾತ್ರಿ ಶ್ರಮಿಸುತ್ತಿದ್ದಾರೆ!.

ಯೋಗಿ ಆದಿತ್ಯನಾಥ್ ಅವರೇ 2002ರಲ್ಲಿ ಸ್ಥಾಪಿಸಿದ ಯುವ ವಾಹಿನಿ ಪೂರ್ವ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಸಡ್ಡು ಹೊಡೆದು 64 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ತಮ್ಮ ನಾಯಕನನ್ನು ನಿರ್ಲಕ್ಷಿಸಲಾಗಿದೆ ಹಾಗೂ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಲಾಗಿಲ್ಲ ಎಂಬ ಕಾರಣ ನೀಡಿ ಯುವ ವಾಹಿನಿ ಪಕ್ಷದ ವಿರುದ್ಧವೇ ಸಮರ ಸಾರಿದೆ.

ಗೋರಖ್ ಪುರದ ಸಂಸದರಾಗಿರುವ ಯೋಗಿ ಆದಿತ್ಯನಾಥ್‌ ಹಾಗೇನೂ ಇಲ್ಲವೆಂದು ಹೇಳಿದ್ದರೂ ಅವರ ಖಾಸಗಿ ಸೇನೆಯ ಉಚ್ಚಾಟಿತ ನಾಯಕರಿಗೆ ಅವರ ಆಶೀರ್ವಾದ ಇದೆಯೆಂದೇ ನಂಬಲಾಗಿದೆ.

ಫೆಬ್ರವರಿ 8ರಂದು ಯೋಗಿ ಆದಿತ್ಯನಾಥ್ ಅವರು ಗೋರಖ್ ಪುರದಲ್ಲಿ ಗೋರಖ್ ನಾಥ ಮಠವು ನಡೆಸುವ ಹಲವು ಸಂಸ್ಥೆಗಳಲ್ಲಿ ಒಂದಾಗಿರುವ ದಿಗ್ವಿಜಯ್ ನಾಥ್ ಕಾಲೇಜಿನಲ್ಲಿ ನೂರಾರು ವಾಹಿನಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು. ಆದರೆ ಈ ಸಭೆಯನ್ನು ರಾಜ್ಯ ಯುವ ವಾಹಿನಿ ಅಧ್ಯಕ್ಷ ಸುನೀಲ್ ಸಿಂಗ್ ಹಾಗೂ ಪ್ರಧಾನ ಕಾರ್ಯದರ್ಶಿ ರಾಮ ಲಕ್ಷ್ಮಣ್ ನೇತೃತ್ವದ ಭಿನ್ನಮತೀಯರ ಗುಂಪು ಬಹಿಷ್ಕರಿಸಿದೆ. ‘‘ಅವರಿಗೂ (ಸುನೀಲ್ ಸಿಂಗ್) ಹಾಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರನ್ನು ಕಸದಂತೆ ಎಸೆದು ಬಿಟ್ಟಿದ್ದೇವೆ’’ ಎಂದು ಸಭೆಯ ಮೊದಲು ಗೋರಖನಾಥ್ ಮಠದ ಮುಖ್ಯ ಅರ್ಚಕ ಯೋಗಿ ಹೇಳಿದ್ದರು.

ಜನವರಿ 7ರಂದು ವಾಹಿನಿ ತನ್ನ ಆರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದಾಗ ಭಿನ್ನಮತ ಬೆಳಕಿಗೆ ಬಂದಿತ್ತು. ಎರಡು ದಿನಗಳ ನಂತರ ಸುನೀಲ್ ಹಾಗೂ ಲಕ್ಷ್ಮಣ್ ಅವರನ್ನು ಉಚ್ಚಾಟಿಸಲಾಗಿತ್ತು. ಇಲ್ಲಿಯ ತನಕ ವಾಹಿನಿ ತನ್ನ 24 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, 25 ಕ್ಷೇತ್ರಗಳಲ್ಲಿ ಶಿವಸೇನೆಯೊಂದಿಗೆ ಮೈತ್ರಿ ಸಾಧಿಸಲಾಗಿದೆ ಎಂದು ಹೇಳಿಕೊಂಡಿದೆ.

ತಮ್ಮ ಉಚ್ಚಾಟನೆ ಅಸಂವಿಧಾನಿಕ ಎಂದು ಹೇಳಿರುವ ಸುನೀಲ್‌, ಪಕ್ಷವು ಯೋಗಿಯ ಮುಖಾಂತರ ಇದನ್ನೆಲ್ಲಾ ಸಾಧಿಸುತ್ತಿದೆ ಎಂದು ಹೇಳಿಕೊಂಡಿದೆ.

ಯುವ ವಾಹಿನಿ ರಾಜಕೀಯ ಸಂಘಟನೆಯಾಗಿಲ್ಲದೇ ಇದ್ದರೂ ಸಾಮಾನ್ಯ ವಿದ್ಯಾರ್ಥಿ ನಾಯಕನಿಂದ ಯೋಗಿ ಆದಿತ್ಯನಾಥ್ ಐದು ಬಾರಿ ಸಂಸದರಾಗಿರುವ ಹಿಂದೆ ಅದರ ಪಾತ್ರ ಉಲ್ಲೇಖನೀಯ. ಯೋಗಿಯವರ ವಿಜಯದ ಅಂತರ 1999 ಚುನಾವಣೆಯಲ್ಲಿ 7,000 ಮತಗಳು ಆಗಿದ್ದವು. ಆದರೆ ಈ ಅಂತರ 2004ರಲ್ಲಿ 1.42 ಲಕ್ಷಕ್ಕೇರಿದ್ದರೆ, 2014ರಲ್ಲಿ 3 ಲಕ್ಷಕ್ಕೇರಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X