Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸದ್ಯ ಟೋಲ್ ಸಂಗ್ರಹ ಬೇಡ: ಸಚಿವ ಖಾದರ್...

ಸದ್ಯ ಟೋಲ್ ಸಂಗ್ರಹ ಬೇಡ: ಸಚಿವ ಖಾದರ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ11 Feb 2017 8:52 PM IST
share
ಸದ್ಯ ಟೋಲ್ ಸಂಗ್ರಹ ಬೇಡ: ಸಚಿವ ಖಾದರ್ ಆಗ್ರಹ

ಮಂಗಳೂರು, ಫೆ. 11: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹ ಸರಿಯಲ್ಲ. ಆದ್ದರಿಂದ ಸದ್ಯ ಟೋಲ್ ಸಂಗ್ರಹವನ್ನು ರದ್ದುಪಡಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ತೊಕ್ಕೊಟ್ಟು-ತಲಪಾಡಿ ಹೆದ್ದಾರಿಯಲ್ಲಿ ಮೇಲ್ಸೇತುವೆ ರಚನೆ, ಸಂಪರ್ಕ ರಸೆತಿ ಕಾಮಗಾರಿ ಪೂರ್ತಿಯಾಗಿಲ್ಲ. ಶೇ.80 ಕಾಮಗಾರಿ ಮುಕ್ತಾಯಗೊಂಡಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಗುತ್ತಿಗೆದಾರರು ಸುಳ್ಳು ಮಾಹಿತಿಯನ್ನು ನೀಡಿದ್ದಾರೆ. ಆದ್ದರಿಂದ ಕಾಮಗಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹಕ್ಕೆ ಅವಕಾಶ ನೀಡಬಾರದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮೂಲಕ ಕೇಂದ್ರ ಸರಕಾರದ ಗಮನವನ್ನು ಸೆಳೆಯಲಾಗಿದೆ ಎಂದರು.

ಟೋಲ್ ಸಂಗ್ರಹಕ್ಕೆ ಭಾರೀ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೋರಾಟ ಸಮಿತಿ ಸದಸ್ಯರು ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಸಭೆಯಲ್ಲಿ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಮೊದಿನ್ ಬಾವ, ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್, ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಎಂಜಿನಿಯರ್ ಕಾಂತರಾಜು, ಉಪ ಪೊಲೀಸ್ ಆಯುಕ್ತ ಕೆ.ಎಂ.ಶಾಂತರಾಜು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು ಎಂದು ಸಚಿವರು ನುಡಿದರು.

ಟೋಲ್ ಸುತ್ತಲಿನ 5 ಕಿ.ಮೀ. ವ್ಯಾಪ್ತಿಯ ವಾಹನಗಳಿಗೆ ಫೆ.25ರವರೆಗೆ ಸಂಚಾರ ಉಚಿತವಾಗಿರುತ್ತದೆ. ಆ ಭಾಗದ ವಾಹನಗಳ ಮಾಲಕರು ವಾಸ್ತವ್ಯದ ಬಗ್ಗೆ ಆಧಾರ ಕಾರ್ಡ್ ನೀಡಬೇಕು. ಕಂಪೆನಿ ಆ ಮಾಹಿತಿ ಆಧಾರದ ಮೇಲೆ ನಿರ್ಧಾರವನ್ನು ಫೆ.25ರ ಸಭೆಯಲ್ಲಿ ಪ್ರಕಟಿಸಬೇಕು ಎಂದು ಸಭೆ ಅಭಿಪ್ರಾಯಪಟ್ಟಿದೆ ಎಂದು ಖಾದರ್ ನುಡಿದರು.

20 ಕಿ.ಮೀ. ವ್ಯಾಪ್ತಿಯೊಳಗೆ ನಾನ್-ಕಮರ್ಷಿಯಲ್ ವಾಹನಗಳಿಗೆ 235 ರೂ. ಮಾಸಿಕ ಪಾಸ್ ನೀಡುವುದು. ಟೋಲ್ ಗೇಟ್‌ನಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಸಿಬ್ಬಂದಿ ಸಮವಸ್ತ್ರ ಧರಿಸುವುದು. ಗುರುತಿನ ಚೀಟಿಯನ್ನು ಹಾಕಿಕೊಳ್ಳುವುದು. ಟೋಲ್ ಸಿಬ್ಬಂದಿಗೆ ಉತ್ತಮ ಗುಣನಡತೆಯ ಬಗ್ಗೆ ತರಬೇತಿ ನೀಡುವುದು. ದುರ್ನಡತೆ ಕಂಡುಬಂದರೆ ಕೆಲಸದಿಂದ ತೆಗೆದುಹಾಕುವುದು ಮೊದಲಾದವುಗಳನ್ನು ಎಲ್ಲ ಟೋಲ್ ಗೇಟ್‌ಗಳಲ್ಲಿ ಅನುಷ್ಠಾನಕ್ಕೆ ತರುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಒತ್ತಾಯಿಸಲಾಗುವುದು ಎಂದರು.

ಶೀಘ್ರದಲ್ಲೇ ಅಧಿಕಾರಿಗಳ ಸಭೆ

ಮಂಗಳೂರು ಮತ್ತು ಬಂಟ್ವಾಳ ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ರಾಜ್ಯ ಸರಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಪಿಡಿಒ ಹಾಗೂ ತಾ.ಪಂ. ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ಸಚಿವ ಖಾದರ್ ಹೇಳಿದರು.

ಎತ್ತಿನಹೊಳೆ ಯೋಜನೆ ಜಾರಿ ವಿರುದ್ಧ ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸಲು ಎಲ್ಲರಿಗೂ ಹಕ್ಕು ಇದೆ. ಇದಕ್ಕೆ ಪರ್ಯಾಯವಾಗಿ ಪಶ್ಚಿಮ ವಾಹಿನಿ ಯೋಜನೆಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ. ಮುಂಬರುವ ಬಜೆಟ್‌ನಲ್ಲಿ 1 ಸಾವಿರ ಕೋಟಿ ರೂ. ಹಣ ಮೀಸಲಿಡಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X