ಪತಿಯಿಂದ ಕೊಲೆ ಯತ್ನ
ಮುಂಡಗೋಡ, ಫೆ.11: ಪತಿಯು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಪರಿಣಾಮ ಸಂತ್ರಸ್ತೆಯು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಇಂದೂರ ಗ್ರಾಮದ ಅಂಬೇಡ್ಕರ್ ಓಣಿಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ
ಬೆಂಕಿಯಿಂದ ಗಂಭೀರ ಗಾಯಗೊಂಡವರನ್ನು ಫಕ್ಕಿರವ್ವ ತಗಡಿನಮನಿ(28) ಎಂದು ತಿಳಿದುಬಂದಿದೆ. ಫಕ್ಕಿರವ್ವಳನ್ನು ಇಲ್ಲಿಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story





