‘ಬೆಟ್ಟಿಂಗ್‌ನ ಆರೋಪಿಗಳನ್ನು ಮಂಪರು ಪರೀಕ್ಷೆಗೊಳಪಡಿಸಿ’
ಚಿಕ್ಕಮಗಳೂರು, ಫೆ.11: ಬೆಟ್ಟಿಂಗ್ ದಂಧೆಯಲ್ಲಿ ಪೊಲೀಸ್ ಅಧಿಕಾರಿಗಳು ಕೆಲವರನ್ನು ‘ನಿನ್ನ ಹೆಸರಿದೆ’ ಎಂದು ಹೆದರಿಸಿ ಹಣ ವಸೂಲಿ ಮಾಡಿದ್ದಾರೆ. ಅದನ್ನು ಗಮನದಲ್ಲಿಟ್ಟುಕೊಂಡು ಬಂಧಿತ ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಶಾಸಕ ಸಿ.ಟಿ. ರವಿ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಈ ದಂಧೆಯಲ್ಲಿ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರು ಸಹ ಕೇಳಿ ಬಂದಿತ್ತು ಎಂದು ಅವರು ಆರೋಪಿಸಿದರು. ಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷೆ ಕವಿತಾ ಶೇಖರ್, ಸದಸ್ಯೆ ಶ್ಯಾಮಲಾರಾವ್, ಜಿಲ್ಲಾ ವಕ್ತಾರ ವರಸಿದ್ದಿ ವೇಣುಗೋಪಾಲ್ ಉಪಸ್ಥಿತರಿದ್ದರು.
Next Story





