ಪುತ್ತೂರಿನ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆಯಿಲ್ಲ : ಸಚಿವ ರಮಾನಾಥ ರೈ

ಪುತ್ತೂರು,ಫೆ.11: ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತ, ಗುಂಪುಗಾರಿಕೆಯಿಲ್ಲ. ಉಪಚುನಾವಣೆಯ ಆರು ಸ್ಥಾನಗಳಲ್ಲಿ ಕಾಂಗ್ರೆಸ್ ಜಯ ಗಳಿಸುವುದು ನಿಶ್ಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮನಾಥ ರೈ ಹೇಳಿದರು.
ಅವರು ಶನಿವಾರ ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಪುತ್ತೂರಿನಲ್ಲಿ ಈ ಹಿಂದೆ ಪಕ್ಷದೊಳಗಿದ್ದ ಸಣ್ಣಪುಟ್ಟ ಗೊಂದಲಗಳು ಬಗೆಹರಿದಿದೆ. ಈಗ ಪ್ರತಿಯೋರ್ವರು ಪಕ್ಷದ ಕಾರ್ಯಕರ್ತರಾಗಿ, ಮುಖಂಡರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಪಕ್ಷದ ಜನಪರ ಸಾಧನೆಯೇ ಗೆಲುವಿಗೆ ಪೂರಕವಾಗಲಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಯಾವ ಚುನಾವಣೆ ಬಂದರೂ ಅದರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಸುತ್ತಾರೆ. ಸಿದ್ಧರಾಮಯ್ಯ ನೇತೃತ್ವದ ರಾಜ್ಯಸರಕಾರ ಬಡವರಿಗೆ 94ಸಿ ಹಕ್ಕುಪತ್ರ, ಕ್ಷೀರಭಾಗ್ಯ. ಸ್ಥಳೀಯ ಸಂಸ್ಥೆಗಳಿಗೆ ಕೋಟ್ಯಾಂತರ ರೂ. ಅನುದಾನ ಬಿಡುಗಡೆಗೊಳಿಸಿದೆ. ಇಂತಹ ನೂರಾರು ಅಭಿವೃದ್ಧಿ ಕೆಲಸಗಳು ಪಕ್ಷಕ್ಕೆ ಶ್ರೀರಕ್ಷೆಯಾಗಲಿದೆ ಎಂದು ಅವರು ಹೇಳಿದರು.
ಶಾಸಕಿ ಶಕುಂತಳಾ.ಟಿ ಶೆಟ್ಟಿ ಮಾತನಾಡಿ, ಪಕ್ಷದಲ್ಲಿ ಗೊಂದಲ ಇಲ್ಲ. ನಾವು ಒಗ್ಗಟ್ಟಾಗಿದ್ದೇವೆ. ಉಪಚುನಾವಣೆಯಲ್ಲಿ ಒಂದಾಗಿ ಪ್ರಚಾರ ಮಾಡಿದ್ದು, ರಾಜ್ಯ ಸರಕಾರ ಮತ್ತು ನಗರಸಭೆಯ ಅಭಿವೃದ್ಧಿ ಕಾರ್ಯಗಳಿಂದ ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಅತ್ಯಕ ಮತಗಳಿಂದ ಗೆಲ್ಲಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಝ್ಲಲ್ ರಹಿಂ, ಮಾಜಿ ಅಧ್ಯಕ್ಷ ಎ.ಹೇಮನಾಥ ಶೆಟ್ಟಿ, ಜಿ.ಪಂ.ಸದಸ್ಯೆಅನಿತಾ ಹೇಮನಾಥ ಶೆಟ್ಟಿ, ನಗರಸಭೆ ಮಾಜಿ ಅಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಕೆಡಿಪಿ ಸದಸ್ಯ ಕೃಷ್ಣಪ್ರಸಾದ್ ಆಳ್ವ, ನಗರಸಭೆ ಸದಸ್ಯರಾದ ಮಹಮ್ಮದ್ ಆಲಿ, ಅನ್ವರ್ ಖಾಸಿಂ, ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಶದ್ ದರ್ಬೆ, ನಗರ ಕಾಂಗ್ರೆಸ್ ಅಧ್ಯಕ್ಷ ಜಗನ್ನಾಥ ರೈ ಸೂತ್ರಬೆಟ್ಟು, ಉಪಚುನಾವಣಾ ಅಭ್ಯರ್ಥಿಗಳಾದ ನಾಗೇಶ ಆಚಾರ್ಯ, ಶ್ಯಾಮಲ, ಸ್ವರ್ಣಲತಾ ಹೆಗ್ಡೆ, ಜೊಹರಾ ನಿಸಾರ್ ಅಹಮ್ಮದ್, ಉಷಾ ಧನಂಜಯ ಆಚಾರ್ಯ, ವೇಣುಗೋಪಾಲ ಉಪಸ್ಥಿತರಿದ್ದರು.







