Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರ ಸರಕಾರ ಸುಭದ್ರ: ದೇವೇಂದ್ರ...

ಮಹಾರಾಷ್ಟ್ರ ಸರಕಾರ ಸುಭದ್ರ: ದೇವೇಂದ್ರ ಫಡ್ನವೀಸ್

ಶಿವಸೇನೆ ಸಚಿವರ ರಾಜೀನಾಮೆ ಬೆದರಿಕೆ ರಾಜಕೀಯ ತಂತ್ರ

ವಾರ್ತಾಭಾರತಿವಾರ್ತಾಭಾರತಿ11 Feb 2017 11:47 PM IST
share

ಮುಂಬೈ, ಫೆ.11: ಮಹತ್ವದ ಮುಂಬೈ ನಗರಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಮೈತ್ರಿಕೂಟದ ಸಹಪಕ್ಷ ಶಿವಸೇನೆಯ ಸಚಿವರು ರಾಜೀನಾಮೆ ಬೆದರಿಕೆ ಒಡ್ಡಿದ್ದರೂ, ತನ್ನ ಸರಕಾರ ಸುಭದ್ರವಾಗಿದೆ. ಪೂರ್ಣಾವಧಿ ಪೂರೈಸಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ. ಹಿಂದೂಸ್ಥಾನ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ತನ್ನ ಅಭಿಪ್ರಾಯ ತಿಳಿಸಿದ ಮುಖ್ಯಮಂತ್ರಿ ಫಡ್ನವೀಸ್, ಪ್ರಸ್ತುತ ಶಿವಸೇನೆಯು ನಮ್ಮಿಡನೆ ಸರಕಾರದಲ್ಲಿದೆ. ಅವರು ಬೆಂಬಲ ಹಿಂಪಡೆದಿಲ್ಲ ಮತ್ತು ಸರಕಾರ ಸುಭದ್ರವಾಗಿದೆ. ಅವರು ಬೆಂಬಲ ವಾಪಸು ಪಡೆದರೆ ಎಂಬ ಪ್ರಶ್ನೆಗೆ ನಾನು ಉತ್ತರಿಸಲಾರೆ. ಆದರೆ ಒಂದಂತೂ ಸತ್ಯ. ಈ ಸರಕಾರ ಪೂರ್ಣಾವಧಿ ಬಾಳಲಿದೆ ಎಂದರು. ಶಿವಸೇನೆಯ ಬೆಂಬಲವಿಲ್ಲದೆಯೂ ಸರಕಾರ ಬಹುಮತ ಪಡೆಯಬಲ್ಲದು ಎಂಬುದು ಫಡ್ನವೀಸ್ ಅವರ ಹೇಳಿಕೆಯ ಗೂಡಾರ್ಥ ಎಂದು ವಿಶ್ಲೇಷಿಸಲಾಗಿದೆ. ನಗರಪಾಲಿಕೆ ಚುನಾವಣೆಯ ಪ್ರಚಾರ ಕಾರ್ಯದ ಅಂತಿಮ ದಿನವಾದ ಫೆ.18ರಂದು ಸರಕಾರಕ್ಕೆ ಶಿವಸೇನೆಯ ಸಚಿವರು ರಾಜೀನಾಮೆ ನೀಡುವರು ಎಂಬ ಬೆದರಿಕೆಯನ್ನೂ ಫಡ್ನವೀಸ್ ಗಂಭೀರವಾಗಿ ಪರಿಗಣಿಸಿಲ್ಲ ಎಂಬುದನ್ನು ಇಲ್ಲಿ ಉಲ್ಲೇಖಿಸಬಹುದು. ಶಿವಸೇನೆಯ ಸಚಿವರು ಮುಂದಿನ ವಾರ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ಹಸ್ತಾಂತರಿಸಲಿದ್ದಾರೆ ಎಂಬ ವರದಿಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎಂಬ ಹೇಳಿಕೆಯ ಹಿಂದೆ ಕೆಲವೊಮ್ಮೆ ರಾಜಕೀಯ ತಂತ್ರಗಾರಿಕೆ ಅಡಗಿರುತ್ತದೆ. ಬೃಹತ್ ರ್ಯಾಲಿಯೊಂದರಲ್ಲಿ ಕಾರ್ಯಕರ್ತರ ಗಮನ ಬೇರೆ ವಿಷಯದತ್ತ ಸೆಳೆಯಲು ಈ ರೀತಿಯ ತಂತ್ರಗಾರಿಕೆ ನಡೆಸಲಾಗುತ್ತದೆ. ಮಾಧ್ಯಮಗಳಲ್ಲಿ ಈ ವಿಷಯ ಇಡೀ ದಿನ ಪ್ರಸಾರವಾಗುತ್ತದೆ ಎಂದವರಿಗೆ ಗೊತ್ತಿರುತ್ತದೆ ಎಂದರು.


ಒಂದು ವೇಳೆ ಶಿವಸೇನೆ ಬೆಂಬಲ ಹಿಂಪಡೆದರೆ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬೆಂಬಲ ನೀಡಬಹುದೇ ಎಂಬ ಪ್ರಶ್ನೆಗೆ- ಪ್ರಸ್ತುತ ಸಂದರ್ಭದಲ್ಲಿ ಇದೊಂದು ಪರಿಕಲ್ಪಿತ ವಿಷಯ ಅಷ್ಟೇ ಎಂದರು. ಶಿವಸೇನೆ ಬೆಂಬಲ ಹಿಂಪಡೆಯದು. ಒಂದು ವೇಳೆ ಹಿಂಪಡೆದರೂ ಆಗ 12 ಸಚಿವರ ಹುದ್ದೆ ಖಾಲಿಯಾಗುತ್ತದೆ. ಈ ಆಮಿಷವನ್ನಿಟ್ಟುಕೊಂಡು ಶಾಸಕರ ಬೆಂಬಲ ಪಡೆಯುವುದು ಕಷ್ಟವೇನೂ ಆಗಲಿಕ್ಕಿಲ್ಲ. ಅಲ್ಲದೆ ಬಹುಮತಕ್ಕೆ ಸುಮಾರು 22 ಶಾಸಕರ ಅಗತ್ಯ ಬೀಳುತ್ತದೆ. ಯಾರಿಗೂ ಮಧ್ಯಾವಧಿ ಚುನಾವಣೆಯಲ್ಲಿ ಆಸಕ್ತಿ ಇಲ್ಲದ ಕಾರಣ ಬೆಂಬಲ ಪಡೆಯಬಹುದು ಎಂಬುದು ಬಿಜೆಪಿ ಲೆಕ್ಕಾಚಾರ ಎನ್ನಲಾಗಿದೆ. ಅದಾಗ್ಯೂ, 63 ಸದಸ್ಯರನ್ನು ಹೊಂದಿರುವ ಶಿವಸೇನೆಯನ್ನು ಎದುರು ಹಾಕಿಕೊಳ್ಳುವುದು ಫಡ್ನವೀಸ್‌ಗೆ ಇಷ್ಟವಿಲ್ಲ ಎನ್ನಲಾಗುತ್ತಿದೆ. 2019ರ ವಿಧಾನಸಭೆ ಚುನಾವಣೆ ಸೇರಿದಂತೆ ಮುಂದಿನ ದಿನಗಳಲ್ಲಿ ಬಿಜೆಪಿಯೊಂದಿಗೆ ಯಾವುದೇ ಮೈತ್ರಿಯ ಸಂಭವವಿಲ್ಲ ಎಂದು ಶಿವಸೇನೆಯ ಮುಖ್ಯಸ್ಥರು ಘೋಷಿಸಿದ್ದರೂ, ಬಿಜೆಪಿ ಮೈತ್ರಿ ಮುಂದುವರಿಯುವ ಬಗ್ಗೆ ಆಶಾವಾದ ಹೊಂದಿದೆ. ಹಿಂದುತ್ವ ಎಂಬುದು ಎರಡೂ ಪಕ್ಷಗಳ ಸಿದ್ಧಾಂತವಾಗಿರುವ ಕಾರಣ ಎರಡೂ ಪಕ್ಷಗಳು ಒಂದೇ ದೋಣಿಯ ಪಯಣಿಗರು ಎಂಬುದು ಫಡ್ನವೀಸ್ ಅಭಿಪ್ರಾಯ. ಮುಂಬೈ ನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದೆ. ಇಲ್ಲಿ ಚುನಾವಣೋತ್ತರ ಮೈತ್ರಿಯ ಪ್ರಶ್ನೆಯೇ ಬಾರದು ಎಂದು ಫಡ್ನವೀಸ್ ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X