ನಾಳೆ ಉಡುಪಿ- ಕುಂದಾಪುರದಲ್ಲಿ ನಿಷೇಧಾಜ್ಞೆ
ಉಡುಪಿ, ಫೆ.12: ಹೆಜಮಾಡಿ ಹಾಗೂ ಸಾಸ್ತಾನ ಗುಂಡ್ಮಿ ಟೋಲ್‌ಗೇಟ್ ಗಳಲ್ಲಿ ಟೋಲ್ ಸಂಗ್ರಹ ವಿರೋಧಿಸಿ ಉಡುಪಿ ಜಿಲ್ಲೆಗೆ ಬಂದ್ ಕರೆಕೊಟ್ಟಿ ರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉಡುಪಿ ಮತ್ತು ಕುಂದಾಪುರ ತಾಲೂಕು ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಫೆ.12ರ ಮಧ್ಯ ರಾತ್ರಿ 12ಗಂಟೆಯಿಂದ 13ರ ಮಧ್ಯರಾತ್ರಿ 12ಗಂಟೆಯವರೆಗೆ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶ ನೀಡಿದೆ.
ಉಡುಪಿ ತಾಲೂಕಿನಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿ ಮತ್ತು ತೆಕ್ಕಟ್ಟೆಯಿಂದ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಇಕ್ಕೆಲ ಎರಡು ಕಿ.ಮೀ. ವ್ಯಾಪ್ತಿಯ ತನಕ ಅಪರಾಧ ಸಂಹಿತೆ 1973ರ ಕಲಂ 144ರ ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅನು ರಾಧ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





