ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು

ಹೆಬ್ರಿ, ಫೆ.12: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಇಂದು ಹೆಬ್ರಿ ಸಮೀಪದ ಕೊಳಗುಡ್ಡೆ ಎಂಬಲ್ಲಿ ನಡೆದಿದೆ.
ಮೃತರನ್ನು ಪೆರ್ಡೂರು ಆಲಂಗಾರು ನಿವಾಸಿ ಪ್ರವೀಣ್ ಪೂಜಾರಿ(26) ಎಂದು ಗುರುತಿಸಲಾಗಿದೆ. ಇವರು ಹೆಬ್ರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಸಂಬಂಧಿಕರನ್ನು ನೋಡಲೆಂದು ಪೆರ್ಡೂರು ಕಡೆಯಿಂದ ಹೆಬ್ರಿ ಕಡೆಗೆ ಬೈಕಿನಲ್ಲಿ ಹೋಗುತ್ತಿದ್ದಾಗ ತೀರ್ಥಹಳ್ಳಿಯಿಂದ ಪೆರ್ಡೂರು ಕಡೆ ಬರುತ್ತಿದ್ದ ಸ್ವಿಫ್ಟ್ ಕಾರು ಎದುರಿನಿಂದ ಢಿಕ್ಕಿ ಹೊಡೆಯಿತು.
ಇದರಿಂದ ಗಂಭೀರವಾಗಿ ಗಾಯಗೊಂಡ ಪ್ರವೀಣ್ ಪೂಜಾರಿ ಸ್ಥಳದಲ್ಲೇ ಮೃತಪಟ್ಟರು. ಅಪಘಾತದಿಂದ ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





