Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಬಾತ್‌ರೂಮ್ ಪಾಲಿಟಿಕ್ಸ್ ನಿಲ್ಲಿಸಿ,...

‘ಬಾತ್‌ರೂಮ್ ಪಾಲಿಟಿಕ್ಸ್ ನಿಲ್ಲಿಸಿ, ಹುದ್ದೆಯ ಘನತೆ ಕಾಪಾಡಿಕೊಳ್ಳಿ’

ಮುಖವಾಣಿ ‘ಸಾಮ್ನಾ’ದಲ್ಲಿ ಪ್ರಧಾನಿಗೆ ಶಿವಸೇನೆ ಉಪದೇಶ

ವಾರ್ತಾಭಾರತಿವಾರ್ತಾಭಾರತಿ13 Feb 2017 12:49 PM IST
share
‘ಬಾತ್‌ರೂಮ್ ಪಾಲಿಟಿಕ್ಸ್ ನಿಲ್ಲಿಸಿ, ಹುದ್ದೆಯ ಘನತೆ ಕಾಪಾಡಿಕೊಳ್ಳಿ’

 ಮುಂಬೈ, ಫೆ.13: ಬಾತ್‌ರೂಮ್ ಪಾಲಿಟಿಕ್ಸ್ ನಿಲ್ಲಿಸಿ, ತಮ್ಮ ಹುದ್ದೆಯ ಘನತೆಯನ್ನು ಕಾಪಾಡಿಕೊಳ್ಳಿ. ವಿಪಕ್ಷಗಳ ಕುಂಡಲಿ(ಜಾತಕ) ಜಾಲಾಡುತ್ತೇನೆಂಬ ನಿಮ್ಮ ಬೆದರಿಕೆಯ ತಂತ್ರವನ್ನು ಮೊದಲು ನಿಲ್ಲಿಸಿ’’ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

 ಸಿಂಗ್ ನೇತೃತ್ವದ ಯುಪಿಎ ಸರಕಾರದಲ್ಲಿ ಹಲವಾರು ಹಗರಣಗಳು ನಡೆದಿದ್ದವು.... 35 ವರ್ಷಗಳ ರಾಜಕಾರಣದಲ್ಲಿ ಕ್ಲೀನ್ ಇಮೇಜ್ ಹೇಗೆ ಕಾಪಾಡಿಕೊಳ್ಳಬೇಕೆಂದು ನಾವು ರಾಜಕಾರಣಿಗಳು ಡಾ.(ಮನಮೋಹನ್ ಸಿಂಗ್) ಸಾಹೇಬರಿಂದ ಕಲಿಯಲಿಕ್ಕಿದೆ. ಇಷ್ಟೊಂದು ಹಗರಣಗಳು ನಡೆದರೂ ಸಿಂಗ್ ಇಮೇಜ್‌ಗೆ ಧಕ್ಕೆಯಾಗಿಲ್ಲ. ಡಾ. ಸಾಹೇಬ್ ರೈಟ್‌ಕೋಟ್ ಧರಿಸಿ ಬಾತ್‌ರೂಮ್ ಸ್ನಾನ ಮಾಡುವ ಏಕೈಕ ವ್ಯಕ್ತಿಯಾಗಿದ್ದಾರೆ’’ ಎಂದು ಇತ್ತೀಚೆಗೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದರು.

ಶಿವಸೇನೆಯ ಮುಖವಾಣಿ ‘ಸಾಮ್ನಾ’ದಲ್ಲಿ ಪ್ರಕಟವಾಗಿರುವ ಪ್ರಮುಖ ಅಂಶಗಳು ಇಂತಿವೆ.

*ನರೇಂದ್ರ ಮೋದಿ ತಮ್ಮ ಪ್ರಧಾನಮಂತ್ರಿ ಹುದ್ದೆಯ ಘನತೆಯನ್ನು ಕಾಪಾಡಿಕೊಳ್ಳಬೇಕು.

*ಉತ್ತರ ಪ್ರದೇಶದ ರ್ಯಾಲಿಯೊಂದರಲ್ಲಿ ಪ್ರಧಾನಿಗಳು ರಾಜಕೀಯ ಪಕ್ಷಗಳ ಜನ್ಮ ಜಾಲಾಡುತ್ತೇನೆಂದು ಹೇಳಿರುವ ಹೇಳಿಕೆ ಅದೊಂದು ಚುನಾವಣೆ ಪ್ರಚಾರವಲ್ಲ. ಬದಲಿಗೆ ಪ್ರತಿಪಕ್ಷಗಳಿಗೆ ಪ್ರಧಾನಿಯ ನೇರ ಬೆದರಿಕೆಯಾಗಿದೆ.

*ಪ್ರತಿಪಕ್ಷಗಳು ಜನ್ಮ ಜಾಲಾಡಿದರೆ ಅದು ಅಧಿಕಾರವನ್ನು ದುರುಪಯೋಗ ಮಾಡಿದಂತಾಗುತ್ತದೆ. ರಾಜಕೀಯ ಪಕ್ಷಗಳ ಜನ್ಮ ಜಾಲಾಡಲು ಜನರು ನಿಮಗೆ ಮತ ಹಾಕಿದ್ದಲ್ಲ.

*ಮಹಾರಾಷ್ಟ್ರ ಮುಖ್ಯಮಂತ್ರಿಗಳು ಕೂಡ ಆಗಾಗ ಪ್ರತಿಪಕ್ಷಗಳ ಜನ್ಮಜಾಲಾಡುವ ಹೇಳಿಕೆ ನೀಡುತ್ತಾರೆ. ಆದರೆ, ನೀವು ಅಧಿಕಾರದಿಂದ ಕೆಳಗಿಳಿದ ಬಳಿಕ ನಿಮ್ಮ ಜಾತಕ ಬೇರೆಯವರ ಕೈಯಲ್ಲಿರುತ್ತದೆ ಎಂದು ನೆನಪಿಟ್ಟುಕೊಳ್ಳಿ.

*ಉತ್ತರಪ್ರದೇಶದಲ್ಲಿ ಮಹಿಳೆಯರು ಸಂಜೆಯ ವೇಳೆಯೂ ಹೊರಬಾರದ ಪರಿಸ್ಥಿತಿಯಿದೆ ಎಂದು ಪ್ರಧಾನಿಗಳು ಹೇಳಿಕೆ ನೀಡಿದ್ದಾರೆ. ಆ ರಾಜ್ಯದಲ್ಲಿ ಬಿಜೆಪಿಯ 70 ಸಂಸದರು ಇದ್ದಾರೆ. ಅವರೇನು ಮಾಡುತ್ತಿದ್ದಾರೆ? ಅವರು ಕೂಡ ಸಂಜೆ ವೇಳೆ ಬಾಗಿಲು ಬಂದ್ ಮಾಡಿಕೊಂಡು ಮನೆಯಲ್ಲಿ ಕೂರುತ್ತಾರೆಯೇ? ಬಿಜೆಪಿ ಸಂಸದರು ಉತ್ತರಪ್ರದೇಶ ಮಹಿಳೆಯರ ರಕ್ಷಣೆಗೆ ಬರಬೇಕಾಗಿದೆ.

*ಬೇರೆಯವರ ಬಾತ್‌ರೂಮ್‌ಗೆ ಇಟುಕಿ ನೋಡುವುದು ಒಳ್ಳೆಯದಲ್ಲ. ಅದನ್ನು ಮೊದಲು ನಿಲ್ಲಿಸಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X