ನಾಳೆ ಶಶಿಕಲಾ ಭವಿಷ್ಯ ನಿರ್ಧಾರ

ಹೊಸದಿಲ್ಲಿ, ಫೆ.13:ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರ ವಿರುದ್ಧದ ಆದಾಯಕ್ಕಿಂತ ಜಾಸ್ತಿ ಆಸ್ತಿ ಹೊಂದಿರುವ ಪ್ರಕರಣದ ತೀರ್ಪು ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ ಪ್ರಕಟಗೊಳ್ಳಲಿದೆ.
ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ನೇತೃತ್ವದ ಸುಪ್ರೀಂ ಕೋರ್ಟ್‌ನ ನ್ಯಾಯಪೀಠ ಬೆಳಗ್ಗೆ 10:30ಕ್ಕೆ ಶಶಿಕಲಾ ವಿರುದ್ಧದ ಪ್ರಕರಣದ ತೀರ್ಪು ಪ್ರಕಟಿಸಲಿದೆ. ಮುಖ್ಯ ಮಂತ್ರಿಯಾಗುವ ಕನಸು ಕಾಣುತ್ತಿರುವ ಶಶಿಕಲಾ ಅವರ ರಾಜಕೀಯ ಭವಿಷ್ಯ ಇದರೊಂದಿಗೆ ನಿರ್ಧಾರವಾಗಲಿದೆ.
Next Story





