Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ.18ರಂದು ಲಯನ್ಸ್ ಪ್ರಾಂತೀಯ ಸಮ್ಮೇಳನ

ಫೆ.18ರಂದು ಲಯನ್ಸ್ ಪ್ರಾಂತೀಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ13 Feb 2017 8:34 PM IST
share
ಫೆ.18ರಂದು ಲಯನ್ಸ್ ಪ್ರಾಂತೀಯ ಸಮ್ಮೇಳನ

ಮೂಡುಬಿದಿರೆ,ಫೆ.13 : 2 ಲಯನ್ಸ್ ವಲಯಗಳನ್ನು ಹೊಂದಿರುವ ಲಯನ್ಸ್ ಪ್ರಾಂತ್ಯದ ಪ್ರಾಂತೀಯ ಸಮ್ಮೇಳನವು ಫೆ.18ರಂದು ಒಂಟಿಕಟ್ಟೆಯ ಸಂಜೀವ ಶೆಟ್ಟಿ ಮಲ್ಟಿಪರ್ಪಸ್ ಹಾಲ್‌ನಲ್ಲಿ ನಡೆಯಲಿದೆಎಂದು ಲಯನ್ಸ್ ಪ್ರಾಂತೀಯ ಅಧ್ಯಕ್ಷ ಪ್ರಮಥ್ ಕುಮಾರ್ ಹೇಳಿದರು.

ಅವರು ಮೂಡುಬಿದಿರೆ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

 ಮೂಡುಬಿದಿರೆ, ಅಲಂಗಾರು, ಶಿರ್ತಾಡಿ, ತೋಡಾರು, ಮಿಜಾರು, ಬೆಳ್ತಂಗಡಿ, ವೇಣೂರು, ಅಳದಂಗಡಿ, ನಾರಾವಿ ಲಯನ್ಸ್ ಕ್ಲಬ್‌ಗಳನ್ನೊಳಗೊಂಡ ಈ ಪ್ರಾಂತ್ಯವು ಹಲವಾರು ಸಾಮಾಜಿಕ ಚಟುವಟಿಕೆಗಳನ್ನು ಕೈಗೊಂಡಿದೆ. ಎಲ್ಲಾ ಕ್ಲಬ್‌ಗಳ ಹಿರಿಯ ಹಾಗೂ ಉತ್ಸಾಹಿ ಸದಸ್ಯರ ಸಮಿತಿಯೊಂದನ್ನು ರಚಿಸಲಾಗಿದ್ದು, ಸಮ್ಮೇಳನವನ್ನು ಸಮಾಜಸೇವೆಯ ಉದ್ದೇಶಗಳಿಂದ ಯಶಸ್ವಿಗೊಳಿಸಲು ನಿರ್ಣಯಿಸಲಾಗಿದೆಎಂದರು.

ಅಂತಾರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆಯ ಶತಮಾನೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಸೇವಾ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗಿದೆ. ಹೋಮ್ ಫಾರ್ ಹೋಮ್ ಲೆಸ್ ಕಾರ್ಯಕ್ರಮದಡಿಯಲ್ಲಿ ಸುಮತಿ ಶೆಟ್ಟಿ ಎಂಬ ಮಹಿಳೆಗೆ 3.60 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿಕೊಡಲಾಗಿದ್ದು, ಇತ್ತೀಚಿಗೆ ಹಸ್ತಾಂತರಿಸಲಾಗಿದೆ. ಇದರ ಜೊತೆಗೆ ಮೂಡುಬಿದಿರೆ ಪುರಸಭೆಗೆ ಕೊಡಮಾಡುವ 25 ಲಕ್ಷ ರೂ. ವೆಚ್ಚದ ಸಾರ್ವಜನಿಕ ಲಯನ್ಸ್ ಉದ್ಯಾನವನದ ಕಾಮಗಾರಿಗೆ ಚಾಲನೆ ನೀಡಲಾಗಿದೆಎಂದರು.

 ಈ ಕಾರ್ಯಕ್ರಮವನ್ನು ಪ್ರಾಂತ್ಯದ ಪ್ರಥಮ ಮಹಿಳೆ ಲ ಸುಪ್ರಭಾ ಪ್ರಮಥ್ ಕುಮಾರ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಅದಾನಿ ಯುಪಿಸಿಎಲ್‌ನ ಜಂಟಿ ಅಧ್ಯಕ್ಷರಾದ ಕಿಶೋರ್ ಆಳ್ವ, ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ಬಿ.ಎ. ನಾಣಿಯಪ್ಪ ಭಾಗವಹಿಸಲಿದ್ದಾರೆ. ಈ ಸಂದರ್ಭ ರಾಷ್ಟ್ರಪ್ರಶಸ್ತಿ ವಿಜೇತೆ ಮೂಡುಬಿದಿರೆಯ ವಿದ್ಯಾರ್ಥಿನಿ ಪಂಚಮಿ ಮಾರೂರು ಹಾಗೂ ಮೂಡುಬಿದಿರೆಯ ಸಾಧಕ ಉದ್ಯಮಿ ಗಣೇಶ್ ಕಾಮತ್ ಅವರಿಗೆ ಸನ್ಮಾನವನ್ನೂ ಹಮ್ಮಿಕೊಳ್ಳಲಾಗಿದೆಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀಪತಿ ಭಟ್, ಅಂಡ್ಯ್ರೂ ಡಿಸೋಜಾ, ರುಕ್ಕಯ್ಯ ಪೂಜಾರಿ, ಮುನ್ನಾರಾವ್, ಶಿವಪ್ರಸಾದ್ ಹೆಗ್ಡೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X