Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಾಭೋಲ್ಕರ್,ಪನ್ಸಾರೆ, ಕಲಬುರ್ಗಿ ಹತ್ಯೆ...

ದಾಭೋಲ್ಕರ್,ಪನ್ಸಾರೆ, ಕಲಬುರ್ಗಿ ಹತ್ಯೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ 16ರಂದು ದಿಲ್ಲಿಯಲ್ಲಿ ಧರಣಿ

ವಾರ್ತಾಭಾರತಿವಾರ್ತಾಭಾರತಿ13 Feb 2017 8:55 PM IST
share
ದಾಭೋಲ್ಕರ್,ಪನ್ಸಾರೆ, ಕಲಬುರ್ಗಿ ಹತ್ಯೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ 16ರಂದು ದಿಲ್ಲಿಯಲ್ಲಿ ಧರಣಿ

ಹೊಸದಿಲ್ಲಿ, ಫೆ.13: ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆಯ ಹಿಂದೆ ತೀವ್ರವಾದಿ ಕೇಸರಿ ಸಂಘಟನೆ ಸನಾತನ ಸಂಸ್ಥೆಯ ಕೈವಾಡವಿದ್ದು, ಅದನ್ನು ನಿಷೇಧಿಸಬೇಕೆಂದು ಮಹಾರಾಷ್ಟ್ರ ಅಂಧಶ್ರದ್ಧೆ ನಿರ್ಮೂಲನಾ ಸಮಿತಿಯು ಸೋಮವಾರ ಆಗ್ರಹಿಸಿದೆ.

 ದಾಬೋಲ್ಕರ್, ಸಿಪಿಐ ನಾಯಕ ಗೋವಿಂದ ಪನ್ಸಾರೆ ಹಾಗೂ ಕನ್ನಡ ಸಾಹಿತಿ ಎಂ.ಎಂ. ಕಲಬುರ್ಗಿ ಅವರನ್ನು ಹತ್ಯೆಗೈಯಲು ‘ ಒಂದೇ ವಿಧದ ಶಸ್ತ್ರಾಸ್ತ್ರ’ಗಳನ್ನು ಬಳಸಲಾಗಿದೆಯೆಂದು ಮಹಾರಾಷ್ಟ್ರ ಅಂಧಶ್ರದ್ಧೆ ನಿರ್ಮೂಲನಾ ಸಮಿತಿ(ಮ್ಯಾನ್ಸ್)ಯ ಅಧ್ಯಕ್ಷ ಅವಿನಾಶ್ ಪಾಟೀಲ್ ಆಪಾದಿಸಿದ್ದಾರೆ ಹಾಗೂ ಈ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿವಿಧ ಸಂಸ್ಥೆಗಳ ನಡುವೆ ಸಮನ್ವಯತೆಯಿರಬೇಕೆಂದು ಅವರು ಆಗ್ರಹಿಸಿದ್ದಾರೆ.

ಹೊಸದಿಲ್ಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು ಮೂವರು ವಿಚಾರವಾದಿಗಳ ಹತ್ಯೆಪ್ರಕರಣದಲ್ಲಿ ಶಾಮೀಲಾದವರ ತ್ವರಿತ ಬಂಧನಕ್ಕೆ ಆಗ್ರಹಿಸಿ ಮ್ಯಾನ್ಸ್ ಮತ್ತಿತರ ಸಮಾನಮನಸ್ಕ ಸಂಘಟನೆಗಳು ಫೆಬ್ರವರಿ 16ರಂದು ಹೊಸದಿಲ್ಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲಿವೆಯೆಂದು ತಿಳಿಸಿದ್ದಾರೆ.

 ಈ ಮೂವರ ಹತ್ಯೆಗೂ ಬಳಕೆಯಾದ ಬುಲೆಟ್‌ಗಳಲ್ಲೂ ಸಾಮ್ಯತೆಯಿರುವುದನ್ನು ವಿಧಿವಿಧಾನ (ಫಾರೆನ್ಸಿಕ್) ವರದಿಗಳು ತೋರಿಸಿಕೊಟ್ಟಿವೆಯೆಂದು ಹೇಳಿದ್ದಾರೆ.

‘‘ಸನಾತನ ಸಂಸ್ಥೆಯ ಕಾರ್ಯಕರ್ತರು ದಾಭೋಲ್ಕರ್ ಕೊಲೆ ಪ್ರಕರಣದಲ್ಲಿ ಮಾತ್ರವಲ್ಲ ಗೋವಾ, ಪನ್ವೇಲ್ ಹಾಗೂ ಥಾಣೆಗಳಲ್ಲಿ ನಡೆದ ಬಾಂಬ್ ಸ್ಫೋಟಗಳಲ್ಲೂ ಹೆಸರಿಸಲ್ಪಟ್ಟಿರುವುದರಿಂದ ಮಹಾರಾಷ್ಟ್ರ ಸರಕಾರವು ಅದನ್ನು ಕೂಡಲೇ ನಿಷೇಧಿಸಬೇಕು’’ ಎಂಂದು ಪಾಟೀಲ್ ಆಗ್ರಹಿಸಿದ್ದಾರೆ. ಮ್ಯಾನ್ಸ್ ಸಂಸ್ಥೆಯನ್ನು ದಾಭೋಲ್ಕರ್ ಸ್ಥಾಪಿಸಿದ್ದರು.

    ದಾಭೋಲ್ಕರ್ ಅವರನ್ನು 2013ರ ಆಗಸ್ಟ್ 20ರಂದು ಪುಣೆಯಲ್ಲಿ ಪಿಸ್ತೂಲ್‌ನಿಂದ ಗುಂಡಿಕ್ಕಿ ಕೊಲ್ಲಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಕಳೆದ ವರ್ಷ ಸನಾತನ ಸಂಸ್ಥೆಯ ಕಾರ್ಯಕರ್ತ ವೀರೇಂದ್ರ ತಾವಡೆಯನ್ನು ಬಂಧಿಸಿತ್ತು. ದಾಭೋಲ್ಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಸನಾತನ ಸಂಸ್ಥೆಯ ಕಾರ್ಯಕರ್ತರಾದ ಸಾರಂಗ್ ಆಕೋಲ್ಕರ್ ಹಾಗೂ ವಿನಯ್ ಪವಾರ್‌ರನ್ನು ಆರೋಪಿಗಳೆಂದು ಹೆಸರಿಸಿತ್ತು. ಇವರ ಪೈಕಿ ಸಾರಂಗ್ ಆಕೋಲ್ಕರ್ 2009ರ ಗೋವಾ ಸ್ಫೋಟ ಪ್ರಕರಣದಲ್ಲೂ ಆರೋಪಿಯಾಗಿ ಹೆಸರಿಸಲ್ಪಟ್ಟಿದ್ದ.

 ತಲೆಮರೆಸಿಕೊಂಡಿರುವ ಅಕೋಲ್ಕರ್ ಹಾಗೂ ಪವಾರ್ ಬಂಧನಕ್ಕೆ ಪೊಲೀಸರು ನಗದುಬಹುಮಾನ ಘೋಷಿಸಬೇಕೆಂದು ಆಗ್ರಹಿಸಿದ ಪವಾರ್, ದಾಭೋಲ್ಕರ್ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಮೂರು ವರ್ಷಗಳಲ್ಲಿ ಕೇವಲ ಓರ್ವ ಆರೋಪಿಯನ್ನು ಮಾತ್ರ ಪೊಲೀಸರು ಬಂಧಿಸಿದ್ದಾರೆಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X