ಕಾಂಗ್ರೆಸ್ ಹಿಂದೂ ವಿರೋಧಿಯಲ್ಲ: ದಿನೇಶ್ ಗುಂಡೂರಾವ್ ಸ್ಪಷ್ಟನೆ
ಗ್ರಾಮ ಸ್ವರಾಜ್ ಅಭಿಯಾನ

ಮಡಿಕೇರಿ, ಫೆ.13: ರಾಷ್ಟ್ರದ ಅಲ್ಪಸಂಖ್ಯಾತರು ಹಾಗೂ ಶೋಷಿತ ಸಮುದಾಯಕ್ಕೆ ರಕ್ಷಣೆ ಒದಗಿಸುವುದು ನಮ್ಮ ಕರ್ತವ್ಯವಾಗಿದ್ದು, ಆ ಪ್ರಯತ್ನವನ್ನಷ್ಟೆ ಕಾಂಗ್ರೆಸ್ ಮಾಡುತ್ತಿದೆಯೇ ಹೊರತು ಕಾಂಗ್ರೆಸ್ ಎಂದಿಗೂ ಹಿಂದೂ ವಿರೋಧಿ ಯಲ್ಲವೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಕೊಡಗು ಜಿಲ್ಲಾ ಕಾಂಗ್ರೆಸ್‌ನ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವತಿಯಿಂದ ನಗರದ ಕೆಳಗಿನ ಕೊಡವ ಸಮಾಜದಲ್ಲಿ ನಡೆದ ಗ್ರಾಮ ಸ್ವರಾಜ್ ಅಭಿಯಾನದ ಪ್ರತಿನಿಧಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸುವ ಕಾಂಗ್ರೆಸ್‌ನ ತತ್ವ ಸಿದ್ಧಾಂತಗಳಿಂದ ಮಾತ್ರ ಈ ರಾಷ್ಟ್ರದ ಉಳಿವು ಾಧ್ಯ ಎಂದು ಅಭಿಪ್ರಾಯಪಟ್ಟರು.
ಭಾವನಾತ್ಮಕ ವಿಚಾರಗಳ ಮೂಲಕ ಜನರನ್ನು ಒಡೆದು ಆಳುವ ರಾಜಕಾರಣದ ತಂತ್ರಗಳು ಮತ್ತು ದೇಶವ್ಯಾಪಿ ಕೋಮು ಶಕ್ತಿಗಳ ವಿರುದ್ಧ ಹೋರಾಟಗಳನ್ನು ನಡೆಸುವ ಶಕ್ತಿ ಕಾಂಗ್ರೆಸ್‌ಗೆ ಮಾತ್ರ ಇರಲು ಸಾಧ್ಯ. ಪ್ರಸ್ತುತ ಸಮಾಜದಲ್ಲಿ ಕೋಮು ಶಕ್ತಿಗಳನ್ನು ಕೆರಳಿಸುವ ಕಾರ್ಯ ನಡೆಯುತ್ತಿದ್ದು, ಇದರ ವಿರುದ್ಧ ಒಗ್ಗಟ್ಟಾಗಿ ಹೋರಾಟ ನಡೆಸುವ ಅಗತ್ಯವಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಭಾರ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಯ ಬೇರುಗಳು ಗ್ರಾಮೀಣ ಭಾಗಗಳಲ್ಲಿ ಮತ್ತಷ್ಟು ವಿಸ್ತರಿಸಬೆೇಕೆಂದು ಅಭಿಪ್ರಾಯಪಟ್ಟರು.







