Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ತಲಪಾಡಿ ಟೋಲ್‌ಗೇಟ್‌ನಲ್ಲಿ ವಾಹನಿಗರ...

​ತಲಪಾಡಿ ಟೋಲ್‌ಗೇಟ್‌ನಲ್ಲಿ ವಾಹನಿಗರ ಸುಲಿಗೆ: ಆರೋಪ

ವಾರ್ತಾಭಾರತಿವಾರ್ತಾಭಾರತಿ14 Feb 2017 3:42 PM IST
share
​ತಲಪಾಡಿ ಟೋಲ್‌ಗೇಟ್‌ನಲ್ಲಿ ವಾಹನಿಗರ ಸುಲಿಗೆ: ಆರೋಪ

ಮಂಗಳೂರು, ಫೆ.14: ಭಾರೀ ಪ್ರತಿರೋಧದ ಹಿನ್ನೆಲೆಯಲ್ಲಿ ಸುದ್ದಿಯಾಗಿರುವ ಕರ್ನಾಟಕ-ಕೇರಳ ಗಡಿಭಾಗದ ತಲಪಾಡಿಯಲ್ಲಿ ತೆರೆಯಲಾದ ‘ಟೋಲ್‌ಗೇಟ್’ನಲ್ಲಿ ವಾಹನಿಗರನ್ನು ಸುಲಿಗೆ ಮಾಡಲಾಗುತ್ತಿದೆ. ಸುಲಿಗೆಗೈದ ಟೋಲ್ ಸಿಬ್ಬಂದಿಯನ್ನು ವಿಚಾರಣೆಗೊಳಪಡಿಸುವ ಬದಲು ‘ನೀವು ಯಾರಿಗೆ ಬೇಕಾದರೂ ದೂರು ನೀಡಿ. ನಮಗೇನೂ ಇಲ್ಲ’ ಎಂದು ಟೋಲ್‌ಗೇಟ್ ಮ್ಯಾನೇಜರ್ ಉಡಾಫೆಯಿಂದ ಉತ್ತರಿಸಿ ದರ್ಪ ಪ್ರದರ್ಶಿಸಿದ್ದಾರೆ ಎಂದು ನಗರ ಬೊಕ್ಕಪಟ್ಣದ ಝೈನುಲ್ ಆಬಿದೀನ್ ಎಂಬವರು ಆರೋಪಿಸಿದ್ದಾರೆ.

ತನ್ನ ಕುಟುಂಬ ಸಮೇತ ಕೇರಳಕ್ಕೆ ತೆರಳಿದ್ದ ಝೈನುಲ್ ಆಬಿದೀನ್ ಮಂಗಳವಾರ ಮಧ್ಯಾಹ್ನ ಸುಮಾರು 1:20ರ ವೇಳೆಗೆ ತಲಪಾಡಿ ಗೇಟ್‌ನಲ್ಲಿ 35 ರೂ. ಟೋಲ್ ನೀಡಿದ್ದಾರೆ. ಸ್ವಲ್ಪ ದೂರ ಬಂದ ಬಳಿಕ ತನಗೆ ನೀಡಿದ ಟಿಕೆಟ್ ತನ್ನದಲ್ಲ ಎಂಬುದು ಝೈನುಲ್ ಆಬಿದೀನ್‌ಗೆ ಮನವರಿಕೆಯಾಯಿತು. ತಕ್ಷಣ ಹಿಂದಿರುಗಿ ಪ್ರಶ್ನಿಸಿದಾಗ ಟೋಲ್ ಸಿಬ್ಬಂದಿ ಕ್ಷಮೆಯಾಚಿಸಿದ್ದಾನೆ. ಆದರೆ ವ್ಯವಸ್ಥಾಪಕರ ಬಳಿ ದೂರು ನೀಡಲು ಮುಂದಾದಾಗ ಅದಕ್ಕೆ ಸೂಕ್ತ ಸ್ಪಂದನೆ ಸಿಗಲಿಲ್ಲ. ಟೋಲ್‌ಗೇಟ್ ಮೇಲ್ವಿಚಾರಕನನ್ನು ಮಾತನಾಡಲು ಕಳುಹಿಸಿ ಸುಮ್ಮನಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ‘ವಾರ್ತಾಭಾರತಿ’ಯೊಂದಿಗೆ ಮಾತನಾಡಿದ ಝೈನುಲ್ ಆಬಿದೀನ್ ‘ಇಂದು ಬೆಳಗ್ಗೆ 8:37ಕ್ಕೆ ಕೇರಳಕ್ಕೆ ತೆರಳಿದ ವಾಹನಿಗರು 35 ರೂ. ಪಾವತಿಸಿದರೂ ಟಿಕೆಟ್ ಪಡೆದುಕೊಂಡಿರಲಿಲ್ಲ. ಅದೇ ಟಿಕೆಟನ್ನು ನನಗೆ ನೀಡಿದರು. ನಾನು ಕೂಡ ಮೊದಲು ಗಮನಿಸಲಿಲ್ಲ. ಸ್ವಲ್ಪ ದೂರ ಕ್ರಮಿಸಿದ ಬಳಿಕ ಹೊಸ ಟೋಲ್‌ಗೇಟ್ ಆದ ಕಾರಣ ಟಿಕೆಟ್ ಪರಿಶೀಲಿಸಿದೆ. ಅದರಲ್ಲಿ ಸಮಯ 8:37 ಎಂದಿದೆ. ವಾಹನದ ಸಂಖ್ಯೆ ಕೆಎಲ್ 14 ಎಂ 5820 ಎಂದಿದೆ. ತಕ್ಷಣ ನಾನು ಹಿಂದಿರುಗಿ ಸಿಬ್ಬಂದಿಯನ್ನು ವಿಚಾರಿಸಿದಾಗ ಆತ ಕ್ಷಮೆಯಾಚಿಸಿದ. ಆದರೆ, ಅಲ್ಲಿನ ಮ್ಯಾನೇಜರ್ ವಿಷಯ ತಿಳಿದುಕೊಳ್ಳಲು ಆಸಕ್ತಿ ವಹಿಸದೆ ಮೇಲ್ವಿಚಾರಕನಲ್ಲಿ ಮಾತನಾಡಲು ಸೂಚಿಸಿದರು. ಆತ ಸಿಬ್ಬಂದಿಯ ಸಂಬಳದಿಂದ 35 ರೂ. ಕಡಿತ ಮಾಡುವುದಾಗಿ ತಿಳಿಸಿದರು. ಇಲ್ಲಿ 35 ರೂ.ನ ಪ್ರಶ್ನೆಯಲ್ಲ. ಅನ್ಯಾಯ, ಅಕ್ರಮ, ಹಗಲು ದರೋಡೆಯ ಪ್ರಶ್ನೆಯಾಗಿದೆ. ಹಾಗಾಗಿ ಇದನ್ನು ಸಕಾಲದಲ್ಲಿ ಪ್ರಶ್ನಿಸದೆ ಮತ್ತು ಆರಂಭದಲ್ಲೇ ಕಡಿವಾಣ ಹಾಕದಿದ್ದರೆ ಭವಿಷ್ಯದ ದಿನಗಳಲ್ಲಿ ಟೋಲ್‌ಗೇಟ್ ಸಂಕಷ್ಟ ತಂದೊಡ್ಡಲಿದೆ. ಅಲ್ಲದೆ ಟೋಲ್‌ಗೇಟ್ ದಾಟಿ ಹೋಗುವ ಪ್ರತಿಯೊಬ್ಬ ವಾಹನಿಗರು ಟಿಕೆಟ್ ಪರಿಶೀಲಿಸಬೇಕು. ಇಲ್ಲದಿದ್ದರೆ ಇವರನ್ನು ಹದ್ದುಬಸ್ತಿನಲ್ಲಿಡಲು ಕಷ್ಟವಾದೀತು’ ಎಂದು ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X