ದಿಡ್ಡಳ್ಳಿ ವಿವಾದ : ಅಹೋರಾತ್ರಿ ಪ್ರತಿಭಟನೆ ಸಧ್ಯಕ್ಕಿಲ್ಲ
ಮಡಿಕೇರಿ ಫೆ.14 : ದಿಡ್ಡಳ್ಳಿ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಛೇರಿ ಎದುರು ನಡೆಸಲು ಉದ್ದೇಶಿಸಿದ್ದ ಅಹೋ ರಾತ್ರಿ ಧರಣಿ ಮುಷ್ಕರವನ್ನು ಮುಖ್ಯಮಂತ್ರಿಗಳ ಭರವಸೆಯ ಹಿನ್ನೆಲೆಯಲ್ಲಿ ಕೈಬಿಟ್ಟಿರುವುದಾಗಿ ಹಿರಿಯ ವಕೀಲ ಎ.ಕೆ.ಸುಬ್ಬಯ್ಯ ತಿಳಿಸಿದ್ದಾರೆ.
ದೂರವಾಣಿ ಮೂಲಕ ದೊರೆಸ್ವಾಮಿ ಅವರೊಂದಿಗೆ ಮಾತನಾಡಿರುವ ಮುಖ್ಯಮಂತ್ರಿಗಳು ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ್ದಾರೆ. ಅಲ್ಲದೆ, ಫೆೆ.15 ರಂದು ಸಮಾಜ ಕಲ್ಯಾಣ ಇಲಾಖಾ ಸಚಿವರೊಂದಿಗೆ ಭೂಮಿ ಮತ್ತು ವಸತಿ ಹಕ್ಕು ಹೋರಾಟ ಸಮಿತಿಯ ಪ್ರತಿನಿಧಿಗಳ ಸಭೆ ನಡೆಯಲಿದ್ದು, ಮುಂದಿನ ನಡೆಯ ಕುರಿತು ಸಭೆಯ ನಂತರ ನಿರ್ಧರಿಸಲಾಗುವುದೆಂದು ಸುಬ್ಬಯ್ಯ ಸ್ಪಷ್ಟಪಡಿಸಿದರು.
Next Story





