ರಾಜ್ಯಪಾಲರನ್ನು ಭೇಟಿಯಾದ ಪಳನಿಸ್ವಾಮಿ

ಚೆನ್ನೈ, ಫೆ.14: ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಬಣದ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಪಿಡಬ್ಲ್ಯುಡಿ ಸಚಿವ ಎಡಪ್ಪಾಡಿ ಪಳನಿ ಸ್ವಾಮಿ ಇಂದು ತಮಿಳುನಾಡಿನ ಉಸ್ತುವಾರಿ ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚನೆಗೆ ಹಕ್ಕು ಮಂಡಿಸಿದರು.
ರಾಜ್ಯಪಾಲ ವಿದ್ಯಾಸಾಗರ ರಾವ್ ಅವರನ್ನು ರಾಜಭವನದಲ್ಲಿ ಭೇಟಿಯಾದ ಪಳನಿ ಸ್ವಾಮಿ ತಮಗೆ 112ಶಾಸಕರ ಬೆಂಬಲ ಇರುವುದಾಗಿ ತಿಳಿಸಿ ಸರಕಾರ ರಚನೆಗೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.ಶಾಸಕರ ಸಹಿಯುಳ್ಳ ಪತ್ರವನ್ನು ರಾಜ್ಯಪಾಲರಿಗೆ ನೀಡಿದರು. ಆದರೆ ರಾಜ್ಯಪಾಲ ವಿದ್ಯಾಸಾಗರ ರಾವ್ ಅವರು ಪಳನಿಸ್ವಾಮಿಗೆ ಈ ಬಗ್ಗೆ ಯಾವುದೇ ಭರವಸೆ ನೀಡಲಿಲ್ಲ ಎಂದು ತಿಳಿದು ಬಂದಿದೆ.
Next Story





