‘ಇಂಗು ಗುಂಡಿಗಳ ಮೂಲಕ ನೀರಿನ ಮಟ್ಟ ಹೆಚ್ಚಳ’

ಉಡುಪಿ, ಫೆ.14: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದು, ಇದರಿಂದ ಈಗಾಗಲೇ ಸಾಕಷ್ಟು ಜನ ತೊಂದರೆಗೆ ಒಳಗಾಗುತ್ತಿದ್ದಾರೆ. ಇದೇ ರೀತಿ ಮುಂದುವರಿದರೆ ದೇಶದಲ್ಲಿ ಜಲಕ್ಷಾಮ ಉಂಟಾಗಲಿದೆ. ಆದುದರಿಂದ ನಾವು ಎಚ್ಚೆತ್ತುಕೊಂಡು ನೀರನ್ನು ಇಂಗು ಗುಂಡಿಗಳಲ್ಲಿ ಸಂಗ್ರಹಿಸಿಡುವ ಮೂಲಕ ನೀರಿನ ಮಟ್ಟವನ್ನು ಹೆಚ್ಚಿಸಬೇಕು ಎಂದು ಜೋಸೆಪ್ ರೆಬೆಲ್ಲೊ ಹೇಳಿದ್ದಾರೆ.
ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಇತ್ತೀಚೆಗೆ ಆಯೋಜಿಸಲಾದ ಜಲ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತಿದ್ದರು.
ಅಧ್ಯಕ್ಷತೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಜೆರಾಲ್ಡ್ ಪಿಂಟೊ ವಹಿಸಿದ್ದರು. ವೇದಿಕೆಯಲ್ಲಿ ಎನ್.ಎಸ್.ಎಸ್. ಅಧಿಕಾರಿ ಅಂಪಾರು ನಿತ್ಯಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಅಭಿಷೇಕ್ ಸ್ವಾಗತಿಸಿದರು. ಸಿಂಧುಜಾ ವಂದಿಸಿದರು. ನಿತೀಶ್ ಕಾರ್ಯಕ್ರಮ ನಿರೂಪಿಸಿದರು.
Next Story





