ಕಾರು-ಸ್ಕೂಟರ್ ಢಿಕ್ಕಿ : ಓರ್ವ ಮೃತ್ಯು

ಬಂಟ್ವಾಳ, ಫೆ. 14: ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಮಾಣಿ ಜಂಕ್ಷನ್ ನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.
ಮಂಗಳೂರು ನಿವಾಸಿ ರಾಜು ದೇವಾಡಿಗ (53) ಮೃತಪಟ್ಟವರಾಗಿದ್ದಾರೆ. ಅವರು ಪೆರ್ನೆಯಿಂದ ಮಂಗಳೂರು ಕಡೆಗೆ ಹೋಂಡಾ ಆಕ್ಟೀವ್ ವಾಹನದಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುವ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಪರಿಣಾಮ, ತೀವ್ರ ಸ್ವರೂಪದಲ್ಲಿ ಗಾಯಗೊಂಡ ರಾಜುರನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ವಿಟ್ಲ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





