ಬಜೆಟ್‌ನಲ್ಲಿ ವಿಶೇಷ ಆದ್ಯತೆ ನೀಡಿ: ಮುಖ್ಯಮಂತ್ರಿಗೆ ಶಾಸಕರ ಮನವಿ

ಮಂಗಳೂರು, ಫೆ.15: ಮುಂಬರುವ ರಾಜ್ಯ ಬಜೆಟ್‌ನಲ್ಲಿ ದ.ಕ. ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈಯ ನೇತೃತ್ವದಲ್ಲಿ ಆಡಳಿತ ಪಕ್ಷದ ಜಿಲ್ಲೆಯ ಶಾಸಕರು ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಶಾಸಕರಾದ ಶಕುಂತಳಾ ಶೆಟ್ಟಿ, ಮೊಯ್ದಿನ್ ಬಾವಾ, ಜೆ.ಆರ್.ಲೋಬೊ, ವಸಂತ ಬಂಗೇರ, ಅಭಯಚಂದ್ರ ಜೈನ್, ಪ್ರತಾಪ್ ಚಂದ್ರ ಶೆಟ್ಟಿ, ಸರಕಾರಿ ಮುಖ್ಯ ಸಚೇತಕ ಐವನ್ ಡಿಸೋಜ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್ ಮತ್ತಿತರರು ನಿಯೋಗದಲ್ಲಿದ್ದರು.
Next Story





