Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ವ-ಸಹಾಯ ಸಂಘಗಳ ಡಿಜಿಟಲೀಕರಣಕ್ಕೆ ಕ್ರಮ;...

ಸ್ವ-ಸಹಾಯ ಸಂಘಗಳ ಡಿಜಿಟಲೀಕರಣಕ್ಕೆ ಕ್ರಮ; ನಬಾರ್ಡ್‌ನ ಅಧ್ಯಕ್ಷ ಹರ್ಷಕುಮಾರ್ ಬನ್ವಾಲಾ

ವಾರ್ತಾಭಾರತಿವಾರ್ತಾಭಾರತಿ15 Feb 2017 10:20 PM IST
share
ಸ್ವ-ಸಹಾಯ ಸಂಘಗಳ ಡಿಜಿಟಲೀಕರಣಕ್ಕೆ ಕ್ರಮ; ನಬಾರ್ಡ್‌ನ ಅಧ್ಯಕ್ಷ ಹರ್ಷಕುಮಾರ್ ಬನ್ವಾಲಾ

ಬೆಳ್ತಂಗಡಿ,ಫೆ.15; ದೇಶದಲ್ಲಿ ಪ್ರಸ್ತುತ ದಾಖಲೆಗಳ ಪ್ರಕಾರ ಎಂಬತ್ತು ಲಕ್ಷ ಸ್ವ ಸಹಾಯ ಸಂಘಗಳಿದ್ದು ಅವುಗಳಲ್ಲಿ ಕೇವಲ ನಲವತ್ತೈದು ಲಕ್ಷದಷ್ಟು ಮಾತ್ರ ಬ್ಯಾಂಕ್‌ಗಳೊಂದಿಗೆ ಸಂಯೋಜನೆಗೊಂಡಿದೆ. ದೇಶದಲ್ಲಿರುವ ಎಲ್ಲ ಸ್ವಸಹಾಯ ಸಂಘಗಳನ್ನು ಬ್ಯಾಂಕ್‌ಗಳೊಂದಿಗೆ ಸಂಯೋಜನೆಗೊಳಿಸಲು ಮತ್ತು ಡಿಜಿಟಲೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹಾಗೂ ನಬಾರ್ಡ್ ಶ್ರಮಿಸುತ್ತಿದೆ ಎಂದು ನಬಾರ್ಡ್‌ನ ಅಧ್ಯಕ್ಷ ಡಾ. ಹರ್ಷಕುಮಾರ್ ಬನ್ವಾಲಾ ಹೇಳಿದರು.

ಅವರು ಬುಧವಾರ ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಸದಸ್ಯರ ವ್ಯವಹಾರ ನಿರ್ವಹಣೆಗಾಗಿ ರೂಪಿಸಿದ ಆ್ಯಪ್ ಬಿಡುಗಡೆ ಮಾಡಿ ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ದಿಯೋಜನೆ ಮಾದರೀ ರೀತಿಯಲ್ಲಿ ಡಿಜಿಟಲೀಕರಣ ಕಾರ್ಯ ಮಾಡಿದ್ದು ನಬಾರ್ಡ್ ಕೂಡಾ ಅದರ ವ್ಯವಹಾರವನ್ನು ಡಿಜಿಟೈಸ್ ಮಾಡಲು ಕಾರ್ಯಪ್ರವೃತ್ತವಾಗಿದೆ. ರಾಷ್ಟ್ರಮಟ್ಟದಲ್ಲಿ ಇಂತಹ ತಾಂತ್ರಿಕ ಕಾರ್ಯಕ್ರಮಗಳನ್ನು ಅಳವಡಿಸಬೇಕು.  ಬ್ಯಾಂಕ್‌ಗಳಿಗೆ ಗುಂಪಿನ ಮಾಹಿತಿ ಸಿಗುವುದರೊಂದಿಗೆ ಗುಂಪಿನ ಸದಸ್ಯರಿಗೂ ಸರಕಾರದ ಹಾಗೂ ಬ್ಯಾಂಕ್‌ಗಳ ಕಾರ್ಯಕ್ರಮಗಳ ಬಗ್ಗೆ ಎಲ್ಲ ಮಾಹಿತಿಗಳೂ ಸಿಗುವಂತಾಗಬೇಕು ಎಂದರು.

ಸಣ್ಣ ರೈತರ ಗುಂಪುಗಳನ್ನು ರಚಿಸಿ ಅವರು ಸಂಘಟಿತರಾಗುವಂತೆ ಹಾಗೂ ಅವರು ಬೆಳೆದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಒದಗುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ನಬಾರ್ಡ್ ಪ್ರಯತ್ನಿಸುತ್ತಿದೆ. ಎಲ್ಲೆಲ್ಲೂ ನೀರಿನ ಅಭಾವ ತಾಂಡವವಾಡುತ್ತಿದ್ದು ಎಲ್ಲರೂ ನೀರಿನ ಮಿತ ಬಳಕೆ ಮಾಡುವ ನಿಟ್ಟಿನಲ್ಲಿ ಮೈಕ್ರೋ ಇರಿಗೇಶನ್ ಬಗ್ಗೆ ಗಮನಹರಿಸುವ ಅಗತ್ಯವಿದೆ ಎಂದು ಅವರು ಸಲಹೆ ನೀಡಿದರು.

 ಕಾರ್ಪೊರೇಶನ್ ಬ್ಯಾಂಕಿನ ಆಡಳಿತ ನಿರ್ದೇಶಕ ಜಿ.ಎಂ. ಭಗತ್ ಟ್ಯಾಬ್ಲೆಟ್ ಪೋನ್ ವಿತರಿಸಿ ಮಾತನಾಡುತ್ತಾ ಇಂದಿನ ಯುಗದಲ್ಲಿ ತಾಂತ್ರಿಕ ವಿಚಾರಗಳಿಗೆ ಹೆಚ್ಚು ಮಹತ್ವ ನೀಡುವ ಅಗತ್ಯವಿದೆ ಈ ನಿಟ್ಟಿನಲ್ಲಿ ಗ್ರಾಮಾಭಿವೃದ್ದಿಯೋಜನೆಯ ಕಾರ್ಯಕ್ರಮಗಳು ಮಾದರಿಯಾಗಿದೆ ಎಂದರು. ನಬಾರ್ಡ್‌ನ ಮುಖ್ಯ ಮಹಾಪ್ರಬಂಧಕ ಎಂ.ಐ. ಗಣಗಿ ಮಾತನಾಡಿ ನಮ್ಮ ಸುತ್ತ-ಮುತ್ತ ಇರುವ ನೆಲ, ಜಲ, ಅರಣ್ಯ ಮೊದಲಾದ ಪ್ರಾಕೃತಿಕ ಸಂಪನ್ಮೂಲಗಳ ಸದುಪಯೋಗ ಮಾಡಿದರೆ ಉತ್ತಮ ಪ್ರಗತಿ ಸಾಧಿಸಬಹುದು ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆಯ ಫಲಾನುಭವಿಗಳು ಪ್ರಗತಿಯ ಪಾಲುದಾರರಾಗಿದ್ದು, ಬದಲಾವಣೆಯ ಹರಿಕಾರರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಾಮಾಭಿವೃದ್ಧಿ ಯೋಜನೆಯ ಮೂಲ ಹಾಗೂ ಮಾದರಿ ಬೆಳ್ತಂಗಡಿ ತಾಲ್ಲೂಕು ಆಗಿದ್ದು ಇಂದು ಎಲ್ಲರೂ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಜೀವನ ಮಟ್ಟ ಸುಧಾರಣೆ ಆದಂತೆ ವೆಚ್ಚವೂ ಹೆಚ್ಚಾಗುತ್ತದೆ. ದುಂದುವೆಚ್ಚ ಮಾಡದೆ ಭವಿಷ್ಯದ ಬಗ್ಯೆ ಚಿಂತನೆ ಮಾಡಿ ಸರಿಯಾಗಿ ತಮ್ಮ ವ್ಯವಹಾರದ ಲೆಕ್ಕಪತ್ರ ನಿರ್ವಹಣೆ ಮಾಡಬೇಕು. ದುಶ್ಚಟಕ್ಕೆ ಬಲಿಯಾಗಬಾರದು ಎಂದು ಕಿವಿ ಮಾತು ಹೇಳಿದರು.

ಹೇಮಾವತಿ ವಿ. ಹೆಗ್ಗಡೆ ಉಪಸ್ಥಿತರಿದ್ದರು. ಡಾ. ಎಲ್. ಎಚ್. ಮಂಜುನಾಥ್ ಸ್ವಾಗತಿಸಿದರು. ರೂಪಾ ಜೈನ್ ಧನ್ಯವಾದವಿತ್ತರು.

 ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಧರ್ಮದ ತಳಹದಿಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿ ಫಲಾನುಭವಿಗಳ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪಗ್ರತಿಗಾಗಿ ಮಾಡುತ್ತಿರುವ ಸೇವೆ-ಸಾಧನೆ ಶ್ಲಾಘನೀಯವಾಗಿದೆ. ಎಲ್ಲರೂ ಇದನ್ನು ಅನುಸರಿಸಲು ಮಾದರಿಯಾಗಿದೆ.

ಡಾ. ಹರ್ಷಕುಮಾರ್ ಬನ್ವಾಲಾ, ನಬಾರ್ಡ್ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X