ಕಳ್ಳತನದ ಆರೋಪಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ
ಮೈಸೂರು, ಫೆ.15: ಕಳ್ಳತನದ ಆರೋಪಕ್ಕೆ ಹೆದರಿ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಭೈರವೇಶ್ವರ ನಗರದ ಭೈರವೇಶ್ವರ ಶಾಲೆಯಲ್ಲಿ ಏಳನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಪವನ್ (12) ಎಂದು ಗುರುತಿಸಲಾಗಿದೆ. ಸಹಪಾಠಿಯ ಬಳಿ ಇದ್ದ ನೂರು ರೂಪಾಯಿ ಪವನ್ ಕಳ್ಳತನ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಇದರಿಂದ ಪವನ್ ಶಾಲಾ ಸಮವಸ್ತ್ರದಲ್ಲೇ ನೇಣಿಗೆ ಶರಣಾಗಿದ್ದಾನೆ.
ಈ ಸಂಬಂಧ ಮೇಟಗಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story





