ಬಾವುಟಗುಡ್ಡೆ: ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

ಮಂಗಳೂರು, ಫೆ.16: ನಿಲ್ಲಿಸಿದ್ದ ಕಾರೊಂದು ಬೆಂಕಿ ಆಕಸ್ಮಿಕಕ್ಕೆ ಒಳಗಾಗಿ ಭಸ್ಮಗೊಂಡ ಘಟನೆ ಬಾವುಟಗುಡ್ಡೆ ಬಳಿ ಇಂದು ಬೆಳಗ್ಗೆ ನಡೆದಿದೆ.
ಬಾವುಟಗುಡ್ಡೆಯಲ್ಲಿರುವ ವಿಜಯಾ ಬ್ಯಾಂಕ್ ಕಚೇರಿಯ ಬಳಿ ಈ ಅವಘಡ ಸಂಭವಿಸಿದೆ. ಇಲ್ಲಿನ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಆಲ್ಟೋ ಕಾರು ಬೆಂಕಿಗೆ ಆಹುತಿಯಾಗಿದೆ. ಕಾರು ನಿಲ್ಲಿಸಿದ್ದ ಸಮೀಪ ರಾಶಿ ಹಾಕಲಾಗಿದ್ದ ಕಸದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಕಾರಿಗೆ ಆವರಿಸಿದೆ. ಇದರಿಂದ ಕಾರು ಭಾಗಶಃ ಹಾನಿಗೀಡಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.
Next Story





