ಇಂದು ಸಂಜೆ 4:30ಕ್ಕೆ ಸಿಎಂ ಆಗಿ ಪಳನಿಸ್ವಾಮಿ ಪ್ರಮಾಣ

ಚೆನ್ನೈ, ಫೆ.16: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಎಐಎಡಿಎಂಕೆಯ ನಾಯಕ ಎಡಪ್ಪಾಡಿ ಪಳನಿಸ್ವಾಮಿ ಇಂದು ಸಂಜೆ ಪ್ರಮಾಣ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಸಂಜೆ 4:30ಕ್ಕೆ ನಡೆಯುವ ಸಮಾರಂಭದಲ್ಲಿ ಪಳನಿಸ್ವಾಮಿ ಅವರು ಉಸ್ತುವಾರಿ ರಾಜ್ಯಪಾಲ ವಿದ್ಯಾಸಾಗರ‍್ ರಾವ್ ಅವರಿಂದ ಪ್ರಮಾಣ ಸ್ವೀಕರಿಸಲಿದ್ದಾರೆ.
ಪಳನಿಸ್ವಾಮಿಗೆ ಸರಕಾರ ರಚನೆಗೆ ಅಧಿಕೃತವಾಗಿ ಆಹ್ವಾನ ನೀಡಿರುವ ಗವರ್ನರ್ ವಿಧಾನಸಭೆಯಲ್ಲಿ ಬಹುಮತ ಸಾಬಿತುಪಡಿಸಲು ಹದಿನೈದು ದಿನಗಳ ಕಾಲಾವಕಾಶ ನೀಡಿದ್ದಾರೆ. ಪಳನಿಸ್ವಾಮಿ ತಮಗೆ 124 ಶಾಸಕರ ಬೆಂಬಲ ಇದೆ ಎಂದು ಹೇಳಿದ್ದಾರೆ. ಸರಕಾರ ರಚನೆಗೆ 118 ಶಾಸಕರ ಬೆಂಬಲ ಅಗತ್ಯ.
ಪ್ರಮಾಣವಚನ ಮುಗಿದ ಬಳಿಕ ಪಳನಿಸ್ವಾಮಿ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಐಎಡಿಎಂಕೆ ಅಧಿನಾಯಕಿ ವಿ.ಕೆ. ಶಶಿಕಲಾ ಅವರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
Next Story





