ಆಳ್ವಾಸ್: ಫೆ.25ರಂದು ರಾಷ್ಟ್ರಮಟ್ಟದ ವಿಚಾರ ಸಂಕಿರಣ
ಮೂಡುಬಿದಿರೆ, ಫೆ.16; ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಕಾಲೇಜು ಕನ್ನಡ ಅಧ್ಯಾಪಕರ ಸಂಘ(ವಿಕಾಸ)ದ ವತಿಯಿಂದ ಫೆಬ್ರವರಿ 25ರಂದು ರಾಷ್ಟ್ರಮಟ್ಟದ ವಿಚಾರ ಸಂಕಿರಣ ನಡೆಯಲಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಇತಿಹಾಸ ಪ್ರಾಧ್ಯಾಪಕ ಪ್ರೊ.ಸುರೇಂದ್ರ ರಾವ್ ವಿಚಾರ ಸಂಕಿರಣವನ್ನು ಉದ್ಘಾಟಿಸಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ. ವಿಕಾಸದ ಅಧ್ಯಕ್ಷ ಡಾ.ನಾಗಪ್ಪ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಹೈದ್ರಾಬಾದಿನ ಪ್ರಾಧ್ಯಾಪಕ ಡಾ.ತಾರಕೇಶ್ವರ ವಿ.ಬಿ, ಮೈಸೂರಿನ ಕನ್ನಡ ಸ್ನಾತಕೋತ್ತರ ಕೇಂದ್ರದ ಸಂಯೋಜಕ ಡಾ.ಬಿ.ವಿ. ವಸಂತ ಕುಮಾರ್, ಬೆಂಗಳೂರು ಸ್ನಾತಕೋತ್ತರ ಕೇಂದ್ರದ ಪ್ರಾಧ್ಯಾಪಕ ಡಾ.ಡೊವಿನಿಕ್ ಡಿ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ಪಿ.ಎಲ್ ಧರ್ಮ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ತಿಳಿಸಿದ್ದಾರೆ.
ಪ್ರಬಂಧಗಳಿಗೆ ಆಹ್ವಾನ:
ವಿಚಾರ ಸಂಕಿರಣದ ವಿಷಯವನ್ನು ಕೇಂದ್ರವಾಗಿರಿಸಿ ಆಸ್ತಕರಿಂದ ಪ್ರಬಂಧ ಮಂಡನೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಪ್ರಬಂಧದ ಸಾರಲೇಖವನ್ನು ಫೆಬ್ರವರಿ 20ರ ಮೊದಲು kannada.ug@alvascollge.com







