ಪೊಲೀಸರಿಂದ ಪಿಎಫ್‌ಐ ಬ್ಯಾನರ್ ತೆರವು: ಪ್ರಕರಣ ದಾಖಲು

ಉಳ್ಳಾಲ, ಫೆ.16: ಅನುಮತಿಯಿಲ್ಲದೆ ಫಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯು ಉಳ್ಳಾಲದಲ್ಲಿ ಫೆ.17ರಂದು ಹಮ್ಮಿಕೊಂಡಿರುವ ಕಾರ್ಯಕ್ರಮದ ಪ್ರಚಾರಕ್ಕಾಗಿ ಉಳ್ಳಾಲ, ತೊಕ್ಕೊಟ್ಟು, ಕಲ್ಲಾಪುವಿನಲ್ಲಿ ಹಾಕಿದ್ದ ಸ್ವಾಗತ ಕಮಾನುಗಳು, ಬ್ಯಾನರ್, ಧ್ವಜಗಳನ್ನು ಪೊಲೀಸರು ತೆರವುಗೊಳಿಸಿ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಫೆ.17ರಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವರ್ಷಾಚರಣೆ ಪ್ರಯುಕ್ತ ಉಳ್ಳಾಲದಲ್ಲಿ "ಯುನಿಟಿ ಮಾರ್ಚ್" ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಅದಕ್ಕಾಗಿ ಬುಧವಾರ ತಡರಾತ್ರಿ ಆಯೋಜಕರು ಉಳ್ಳಾಲ, ಕಲ್ಲಾಪು, ತೊಕ್ಕೊಟ್ಟು, ಚೆಂಬುಗುಡ್ಡೆ ಭಾಗದಲ್ಲಿ ಸ್ವಾಗತ ಕಮಾನು , ಬ್ಯಾನರ್ ಗಳನ್ನು ಹಾಗೂ ಧ್ವಜಗಳನ್ನು ಪ್ರಚಾರಕ್ಕೆಂದು ಅಳವಡಿಸಿದ್ದರು.
ಆದರೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಅನುಮತಿ ನೀಡದಿರುವುದರಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ಕಮೀಷನರ್ ಅವರ ಆದೇಶದಂತೆ ಪೊಲೀಸರು ಕಮಾನು, ಬ್ಯಾನರ್ ತೆರವುಗೊಳಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





