ಫೆ.18ರಂದು ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ
ಉಡುಪಿ, ಫೆ.16: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಈ ಬಾರಿಯೂ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಸ್ಪರ್ಧೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಜಿಲ್ಲಾ ಮಟ್ಟದ ಲಿಖಿತ ರಸಪ್ರಶ್ನೆ ಸ್ಪರ್ಧೆ ಫೆ.18ರಂದು ಬೆಳಗ್ಗೆ 10:00ರಿಂದ ಅಪರಾಹ್ನ 1:00ರವರೆಗೆ ಆಯಾ ಜಿಲ್ಲಾ ಕೇಂದ್ರದಲ್ಲಿ ನಡೆಯಲಿದೆ.
ಜಿಲ್ಲಾ ಮಟ್ಟದ ಪರೀಕ್ಷಾ ಕೇಂದ್ರವನ್ನು ಕರಾವಿಪ ಜಿಲ್ಲಾ ಸಂಯೋಜಕರು ಮತ್ತು ಉಪನಿರ್ದೇಶಕರು ಆಯ್ಕೆ ಮಾಡಲಿದ್ದಾರೆ. ಪ್ರತಿ ಶಾಲೆಯಿಂದ ಇಬ್ಬರು ವಿದ್ಯಾರ್ಥಿಗಳ ಒಂದು ತಂಡ ಮಾತ್ರ ಪರೀಕ್ಷೆಗೆ ಹಾಜರಾಗಲು ಅವಕಾಶವಿದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಸ್ಪರ್ಧಿಸುವರು.
ರಾಜ್ಯಮಟ್ಟದ ಸ್ಪರ್ಧೆ ಮಾ.4ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಆಯಾ ಜಿಲ್ಲೆಯ ಉಪನಿರ್ದೇಶಕರ ಕಚೇರಿಯನ್ನು ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ನ ಕಚೇರಿ, ರಾಜ್ಯ ಸಂಯೋಜಕರಾದ ಆರ್ ಎಸ್ ಪಾಟೀಲ್ (ಮೊ:9448867705) ಹಾಗೂ ಸಹಸಂಚಾಲಕ ಬಿ.ದೊಡ್ಡಬಸಪ್ಪ (ಮೊ: 9880656200) ಇವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ನ ಪ್ರಕಟಣೆ ತಿಳಿಸಿದೆ.





