ನಾಳೆ ಕರ್ಣಾಟಕ ಬ್ಯಾಂಕ್ ಸಂಸ್ಥಾಪಕರ ದಿನಾಚರಣೆ
ಮಂಗಳೂರು, ಫೆ.16: ಕರ್ಣಾಟಕ ಬ್ಯಾಂಕ್ ಸಂಸ್ಥಾಪಕರ ದಿನಾಚರಣೆ ಫೆ.18ರಂದು ಸಂಜೆ 4:30ಕ್ಕೆ ಪಂಪ್‌ವೆಲ್ ವೃತ್ತದ ಬಳಿ ಇರುವ ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಸಮಾರಂಭದಲ್ಲಿ ಮಣಿಪಾಲ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಬಿ.ಎಂ.ಹೆಗ್ಡೆ ‘ಮಾನವ-ಹಣ ಮತ್ತು ಸಂತೋಷ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭ ಪ್ರಿಯಾ ಸಹೋದರಿಯರ ಕರ್ಣಾಟಕ ಶಾಸೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ. ಬ್ಯಾಂಕ್‌ನ ಆಡಳಿತ ನಿರ್ದೇಶಕ ಹಾಗೂ ಮುಖ್ಯಕಾರ್ಯನಿರ್ವಹಣಾಕಾರಿ ಪಿ.ಜಯರಾಮ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





