ನಾಳೆಯಿಂದ ಸೌಹಾರ್ದ ಸ್ಪೋರ್ಟ್ಸ್ ಕ್ಲಬ್‌ನ ರಜತವರ್ಷ
ಮಂಗಳೂರು, ಫೆ.16: ಕುಪ್ಪೆಪದವು ಸೌಹಾರ್ದ ಸ್ಪೋರ್ಟ್ಸ್ ಕ್ಲಬ್‌ನ ರಜತ ವರ್ಷ ಕಾರ್ಯಕ್ರಮವು ಫೆ.18ರಿಂದ 20ರವರೆಗೆ ಕುಪ್ಪೆಪದವು ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಕ್ಲಬ್‌ನ ಗೌರವಾಧ್ಯಕ್ಷ ಬಾಲಕೃಷ್ಣ ತಿಳಿಸಿದರು.
ಗುರುವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 2017ರ ವರ್ಷಪೂರ್ತಿ ಸಂಭ್ರಮಾಚರಣೆ ಮಾಡಲು ನಿರ್ಧರಿಸಿದೆ. ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯವಲ್ಲದೆ, 2017ಕ್ಕೆ ಜನಾಕರ್ಷಣೆಯ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ. ಅಲ್ಲದೆ ರಕ್ತದಾನ ಶಿಬಿರ, ವೈದ್ಯಕೀಯ ಶಿಬಿರ, ಸ್ವಚ್ಛತಾ ಕಾರ್ಯಕ್ರಮ, ನಿರ್ಗತಿಕರಿಗೆ ಸಹಾಯ ಮಾಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.
ಕ್ಲಬ್‌ನ ಸ್ಥಾಪಕ ವಸಂತ ಆಚಾರಿಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಶಾಸಕ ಮೊಯ್ದಿನ್ ಬಾವಾ ಉದ್ಘಾಟಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕ್ಲಬ್‌ನ ಅಧ್ಯಕ್ಷ ಹಸನ್ ಬಾವಾ, ಉಪಾಧ್ಯಕ್ಷ ನೌಶಾದ್ ನಡುಪಳ್ಳ, ಸಲಹೆಗಾರ ಅಬ್ದುಲ್ ಖಾದರ್ ಉಪಸ್ಥಿತರಿದ್ದರು.
Next Story





