ಅನಿವಾಸಿ ಭಾರತೀಯ ಕನ್ನಡಿಗರಿಗೆ ಕೇರಳ ಮಾದರಿಯ ಸಮಿತಿ ರಚನೆಗೆ ವರದಿ ಮಂಡನೆ: ಶಾಸಕ ಜೆ.ಆರ್. ಲೋಬೊ
ಮಂಗಳೂರು, ಫೆ.17: ರಾಜ್ಯದ ಅನಿವಾಸಿ ಭಾರತೀಯ ಕನ್ನಡಿಗರ ಕಲ್ಯಾಣಕ್ಕಾಗಿ ಕೇರಳ ಮಾದರಿಯ ಸಮಿತಿ ರಚಿಸಬೇಕೆಂದು ರಾಜ್ಯ ವಿಧಾನ ಸಭೆಯಲ್ಲಿ ವರದಿ ಮಂಡಿಸಲಾಗಿದೆ ಎಂದು ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಅಧ್ಯಕ್ಷ ಹಾಗು ಶಾಸಕ ಜೆ.ಆರ್. ಲೋಬೊ ಹೇಳಿದರು.
ಶುಕ್ರವಾರ ತನ್ನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅನಿವಾಸಿ ಭಾರತೀಯ ಕನ್ನಡಿಗರ ಕಲ್ಯಾಣದ ನಿಟ್ಟಿನಲ್ಲಿ ಕೇರಳ, ಗೋವಾ, ಆಂಧ್ರಪದೇಶದಲ್ಲಿ ಸಮಿತಿಯು ಅಧ್ಯಯನ ಮಾಡಿದೆ. ಅಂತಿಮವಾಗಿ ಕೇರಳ ಸರಕಾರವು ಅನಿವಾಸಿ ಭಾರತೀಯರ ಕಲ್ಯಾಣಕ್ಕಾಗಿ ಹಮ್ಮಿಕೊಂಡ ಸಾಕಷ್ಟು ಯೋಜನೆಗಳು ಸಮಿತಿಗೆ ತೃಪ್ತಿಯನ್ನುಂಟು ಮಾಡಿದೆ. ಅದನ್ನೇ ಆಧಾರವಾಗಿಟ್ಟುಕೊಂಡು ಸಮಿತಿಯು ವಿಧಾನಮಂಡಲದಲ್ಲಿ ತನ್ನ ವರದಿ ಮಂಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಾಲಿನ ಬಜೆಟ್‌ನಲ್ಲಿ ಆ ಬಗ್ಗೆ ಘೋಷಣೆ ಮಾಡುವ ವಿಶ್ವಾಸವಿದೆ ಎಂದರು.
ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಅತ್ಯಧಿಕ ಮಂದಿ ಅನಿವಾಸಿ ಭಾರತೀಯ ಕನ್ನಡಿಗರಾಗಿದ್ದು, ಇದರಲ್ಲಿ ಹೆಚ್ಚಿನವರು ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದಾರೆ.ಅದರಲ್ಲೂ ಮುಖ್ಯವಾಗಿ ಗಲ್ಫ್ ರಾಷ್ಟ್ರಗಳಲ್ಲಿ ಕೆಳಹಂತದ ಉದ್ಯೋಗಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇವರು ನಾನಾ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಆದರೆ, ಇವರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸುವ ವ್ಯವಸ್ಥೆ ಇಲ್ಲಿಲ್ಲ. ಈ ನಿಟ್ಟಿನಲ್ಲಿ ಕೇರಳ ಮಾದರಿಯ ಸಮಿತಿ ರಚಿಸುವುದು ಅನಿವಾರ್ಯವಾಗಿದೆ ಎಂದು ಜೆ.ಆರ್.ಲೋಬೊ ಹೇಳಿದರು.
ಅನಿವಾಸಿ ಭಾರತೀಯ ಸಮಿತಿಯನ್ನು 2008ರಲ್ಲಿ ರಚಿಸಲಾಗಿದೆ. ಆದರೆ ಈ ಸಮಿತಿಯು ಅನಿವಾಸಿ ಭಾರತೀಯ ಕನ್ನಡಿಗರ ಕಲ್ಯಾಣಕ್ಕಾಗಿ ನಿರ್ದಿಷ್ಟ ವ್ಯವಸ್ಥೆ ಮಾಡಿಲ್ಲ. ಕೇರಳದಲ್ಲಿ ಅಧ್ಯಯನ ಪ್ರವಾಸಕೈಗೊಂಡಾಗ ಅನೇಕ ರಚನಾತ್ಮಕ ಕೆಲಸಗಳು ಅಲ್ಲಿನ ಸಮಿತಿಯಿಂದ ಆಗಿರುವುದು ಸ್ಪಷ್ಟವಾಗುತ್ತದೆ. ಕೇರಳದಲ್ಲಿ ಱನೋರ್ಕಾೞ ಎಂಬ ಇಲಾಖೆಯಿದ್ದು, ಅದರ ಅಧೀನದಲ್ಲಿ "ನೋರ್ಕಾ ರೂಟ್ಸ್‌ೞಮತ್ತು ಱದಿ ಕೇರಳ ನಾನ್ ರೆಸಿಡೆಂಟಲ್ ಕೇರಲಿಟಿಸ್ ವೆಲ್ಫೇರ್ ಬೋರ್ಡ್" ಎಂಬ 2 ಸರಕಾರಿ ಸ್ವಾಮ್ಯದ ಸಂಸ್ಥೆಯಿದೆ. ಅವುಗಳ ಮೂಲಕ ಅನೇಕ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಅನಿವಾಸಿ ಭಾರತೀಯ ಕನ್ನಡಿಗರ ಬಗ್ಗೆ ಸಮೀಕ್ಷೆ ಮಾಡಬೇಕು. ಈ ಕನ್ನಡಿಗರ ಕಲ್ಯಾಣಕ್ಕಾಗಿ ಱನೋರ್ಕಾ ರೂಟ್ಸ್‌ೞತೆರೆಯಬೇಕು.
ಕಾರ್ಯಕ್ರಮದ ಅನುಷ್ಠಾನಕ್ಕಾಗಿ ರಾಜ್ಯದ ಶೇ.51 ಮತ್ತು ಅನಿವಾಸಿ ಭಾರತೀಯ ಕನ್ನಡಿಗರ ಶೇ.49 ಹಣವನ್ನು ಒದಗಿಸಬೇಕು. ವಿವಾಹದೃಢೀಕರಣ ಪತ್ರ, ಶೈಕ್ಷಣಿಕ ಪ್ರಮಾಣಪತ್ರಗಳ ದೃಢೀಕರಣ, ವೀಸಾ ತಪಾಸಣೆ ಇತ್ಯಾದಿ ಪಡೆಯಲು ರಾಜ್ಯದ ಪ್ರಮುಖ ನಗರಗಳಲ್ಲಿ ಕೇಂದ್ರಗಳನ್ನು ತೆರೆಯಬೇಕು. ಶೇರು ಬಂಡವಾಳ ಹೂಡಿಕೆಗೆ ಪ್ರತ್ಯೇಕ ಸಂಸ್ಥೆ ರಚಿಸಬೇಕು. ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ಧನಸಹಾಯ, ಆರೋಗ್ಯ ವಿಮಾ ಯೋಜನೆ, ಶಿಕ್ಷಣಕ್ಕೆ ಸಹಾಯ ಮಾಡಬೇಕು, ಗುರುತಿನ ಚೀಟಿ ನೀಡಬೇಕು, ಎಲ್ಲ ಸಮಸ್ಯೆಗಳನ್ನು ಒಂದೆಡೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಅನಿವಾಸಿ ಭಾರತೀಯ ಕನ್ನಡಿಗರ ಭವನ ತೆರೆಯಬೇಕು ಮತ್ತು ಸಮಿತಿ ರಚಿಸಿ ಪ್ರಾಥಮಿಕ ಹಂತದಲ್ಲಿ 50 ಕೋ.ರೂ. ಮಂಜೂರು ಮಾಡಬೇಕು ಎಂದು ವಿಧಾನಸಭೆಯಲ್ಲಿ ಮಂಡಿಸಲಾದ ವರದಿಯಲ್ಲಿ ತಿಳಿಸಲಾಗಿದೆ ಎಂದರು.
ಪೂಜಾರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿಲ್ಲ:
ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ವಿರುದ್ಧ ಕ್ರಮ ಜರಗಿಸಬೇಕು ಎಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ನಾನು ಒತ್ತಾಯಿಸಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ನಾನೆಂದೂ ಅಂತಹ ಒತ್ತಾಯ ಮಾಡಿಲ್ಲ. ಪೂಜಾರಿ ಪಕ್ಷ ಕಟ್ಟಿದ ಹಿರಿಯ ನಾಯಕರಲ್ಲೊಬ್ಬರು. ಅವರ ವಿರುದ್ಧ ಕ್ರಮ ಜರಗಿಸಿ ಎಂದು ಹೇಳುವಷ್ಟು ದೊಡ್ಡ ವ್ಯಕ್ತಿ ನಾನಲ್ಲ ಎಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮೇಯರ್ ಹರಿನಾಥ್, ಸ್ಥಾಯಿ ಸಮಿತಿಯ ಅಧ್ಯಕ್ಷ ಲ್ಯಾನ್ಸ್ ಲಾಟ್ ಪಿಂಟೊ, ಕಾರ್ಪೊರೇಟರ್ ಪ್ರವೀಣ್‌ಚಂದ್ರ ಆಳ್ವ, ಕೆಎಸ್ಸಾರ್ಟಿಸಿ ನಿರ್ದೇಶಕ ಟಿ.ಕೆ.ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.







