ರೈಲಿನಡಿಗೆ ಹಾರಿ ಮಹಿಳೆ ಆತ್ಮಹತ್ಯೆ
ಉಡುಪಿ, ೆ.17: ಚಲಿಸುತ್ತಿದ್ದ ರೈಲಿನಡಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದ್ರಾಳಿ ಸಮೀಪ ಶುಕ್ರವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಮೂಲತಃ ಕುಂದಾಪುರದ ಅಮ್ಟಾಡಿಯ ಮುಷ್ತ್ತಾಖ್ ಅಹ್ಮದ್ ಎಂಬವರ ಪತ್ನಿ ಝಾಹಿರಾ ಬಾನು(48) ಎಂದು ಗುರುತಿಸಲಾಗಿದೆ. ಇಂದ್ರಾಳಿಯ ್ಲಾಟ್‌ನಲ್ಲಿ ವಾಸವಾಗಿದ್ದ ಇವರು ಕಳೆದ 25ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಪರಿಣಾಮ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೇ ಚಿಂತೆಯಲ್ಲಿ ಮನನೊಂದ ಅವರು ಬೆಳಗ್ಗೆ ಮನೆಯಿಂದ ಹೊರಟು ಇಂದ್ರಾಳಿ ರೈಲ್ವೆ ಹಳಿಯಲ್ಲಿ ಚಲಿಸುತ್ತಿದ್ದ ರೈಲಿನಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





