ಇಂದು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ
ಪಡುಬಿದ್ರೆ, ಫೆ.17: ಉಚ್ಚಿಲದ ಸರಸ್ವತಿ ಮಂದಿರ ಶಾಲೆಯ ಹಳೆವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಫೆ.18ರಂದು ಶಾಲಾ ಮೈದಾನದಲ್ಲಿ ನಡೆಯಲಿದೆ.
ಸಂಜೆ 7ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ವಿನಯಕುಮಾರ್ ಸೊರಕೆ ಉದ್ಘಾಟಿಸಲಿದ್ದಾರೆ. ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಬಳಿಕ ಶಾಲಾ ಮಕ್ಕಳಿಂದ ವೈವಿಧ್ಯಮಯ ಕಾರ್ಯಕ್ರಮ. ಬೆದ್ರ ಕಲಾವಿದರಿಂದ ‘ನೆಟ್‌ವರ್ಕ್ ತಿಕ್ಕುಜಿ’ ನಾಟಕ ಪ್ರದರ್ಶನ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story





