ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಶಿಬಿರ

ವಿಟ್ಲ, ೆ.17: ಮುಂಬರುವ ಎಸೆಸೆಲ್ಸಿ ಪರೀಕ್ಷೆ ಯುವ ಭವಿಷ್ಯವನ್ನು ರೂಪಿ ಸುವ ಜೀವನದ ಪರೀಕ್ಷೆಯಾಗಲಿ ಎಂದು ದ.ಕ. ಜಿಪಂ ಸಿಇಒ ಡಾ.ರವಿ ಹೇಳಿದರು. ಜಮೀಯ್ಯತುಲ್ ಲಾಹ್ ಬಂಟ್ವಾಳ ತಾಲೂಕು ಘಟಕ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಕಾರಿಗಳ ಕಚೇರಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಟ್ಲದ ವಿಠಲ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಎಸೆಸೆಲ್ಸಿ ವಿದ್ಯಾರ್ಥಿಗಳ ಪ್ರೇರಣಾ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್ ಮಾತನಾಡಿದರು. ಜಮೀಯ್ಯತುಲ್ ಲಾಹ್ ಬಂಟ್ವಾಳ ತಾಲೂಕು ಘಟಕಾಧ್ಯಕ್ಷ ಬಿ.ಎಂ.ತುಂಬೆ ಅಧ್ಯಕ್ಷತೆ ವಹಿಸಿದ್ದರು.
ಜಿಪಂ ಸದಸ್ಯ ಎಂ.ಎಸ್.ಮುಹಮ್ಮದ್, ಬಂಟ್ವಾಳ ತಾಪಂ ಉಪಾ ಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಶಿಕ್ಷಣ ಸಂಯೋಜಕರಾದ ಶ್ರೀಕಾಂತ್, ಕೆಂಪಣ್ಣ, ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗ ವಹಿಸಿದ್ದರು. ಜಮೀಯ್ಯತುಲ್ ಲಾಹ್ ಪದಾಕಾರಿಗಳಾದ ಸುಲೈಮಾನ್ ಸೂರಿಕುಮೇರು, ಲತ್ೀ ನೇರಳಕಟ್ಟೆ, ರಶೀದ್ ವಿಟ್ಲ, ಅಬ್ದುಲ್ ಜಲೀಲ್ ಕರೋಪಾಡಿ ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಕಾರಿ ಲೋಕೇಶ್ ಸ್ವಾಗತಿಸಿದರು. ಅಬೂಬಕರ್ ವಿಟ್ಲ ವಂದಿಸಿದರು. ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು.







