ಮಂಗಳೂರು: ವಿವಿಧ ಹಿಂದಿ ಸ್ಪರ್ಧೆಗಳ ಉದ್ಘಾಟನೆ

ಮಂಗಳೂರು, ಫೆ.18: ಭಾರತದ ಸ್ವಾತಂತ್ರ್ಯ ಹೋರಾಟದ ಯಶಸ್ಸಿಗೆ ಬಹುಮುಖ್ಯ ಕಾರಣ ಹಿಂದಿ ಭಾಷೆ. ಇದು ಭಾರತದಾದ್ಯಂತ ಒಂದು ಕೊಂಡಿಯಾಗಿ ಕೆಲಸ ಮಾಡಿತು. ಇದರಿಂದಾಗಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ವಿವಿಧ ಭಾಷೆಗಳನ್ನಾಡುವ ಜನರು ಒಂದಾಗಲು ಸಾಧ್ಯವಾಯಿತು ಎಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಹೇಳಿದರು.
ಮಂಗಳೂರು ಪ್ರಾದೇಶಿಕ ಹಿಂದಿ ಪ್ರಚಾರ ಸಮಿತಿಯು ಸಪ್ತತಿ ಸಮಾರಂಭದ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ವಿವಿಧ ಹಿಂದಿ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಂಗಳೂರಿನ ಇಂದಿರಾಗಾಂಧಿ ಬಿಎಡ್ ಕಾಲೇಜಿನ ಪ್ರಾಚಾರ್ಯ ಡಾ. ರಂಜಯ್ ಸಿಂಗ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಪ್ರೊ.ಶ್ರೀಧರ ಭಟ್ ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕ ಡಾ. ಮುರಳೀಧರ ನಾಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಚಿದಾನಂದ ದೇವಾಡಿಗ ವಂದಿಸಿದರು. ಡಾ. ಕವಿತಾ ಕಾರ್ಯಕ್ರಮ ನಿರೂಪಿಸಿದರು.
Next Story





