Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಕ್ಷದಿಂದ ಹೊರಹಾಕುವುದಾದರೆ ಹಾಕಲಿ:...

ಪಕ್ಷದಿಂದ ಹೊರಹಾಕುವುದಾದರೆ ಹಾಕಲಿ: ಜನಾರ್ದನ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ18 Feb 2017 6:58 PM IST
share
ಪಕ್ಷದಿಂದ ಹೊರಹಾಕುವುದಾದರೆ ಹಾಕಲಿ: ಜನಾರ್ದನ ಪೂಜಾರಿ

ಮಂಗಳೂರು, ಫೆ.18: ಪಕ್ಷದಿಂದ ನನ್ನನ್ನು ಹೊರಹಾಕುವುದಾದರೆ ಈವತ್ತೇ ಹಾಕಲಿ. ನಾನು ಅದನ್ನು ಖುಷಿಯಿಂದ ಸ್ವೀಕರಿಸುವೆ. ಪಾರ್ಲಿಮೆಂಟ್‌ನಲ್ಲಿ 'ಸತ್ಯಮೇವ ಜಯತೇ' ಎಂದು ಬರೆಯಲಾಗಿದೆ. ಹಾಗಾಗಿ ಯಾವತ್ತೂ ಸತ್ಯವೇ ಗೆಲ್ಲುವುದು ಎಂದು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಹೇಳಿದರು.

ಶನಿವಾರ ಕುದ್ರೋಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ ಗಾಂಧಿ ಕುಟುಂಬದ ಮೇಲೆ ನನಗೆ ನಂಬಿಕೆಯಿದೆ. ನನ್ನನ್ನು ಪಕ್ಷದಿಂದ ಹೊರ ಹಾಕುವುದು ಅಷ್ಟು ಸುಲಭವಿಲ್ಲ. ನಾನೇನು ತಪ್ಪು ಮಾಡಿದೆ? ಸಿದ್ಧರಾಮಯ್ಯರಿಗೆ ಸಲಹೆ ಕೊಟ್ಟದ್ದು ತಪ್ಪಾ? ಸಿದ್ಧರಾಮಯ್ಯ ಜೆಡಿಎಸ್‌ನಲ್ಲಿದ್ದು ಹಣಕಾಸು ಸಚಿವರಾಗಿದ್ದಾಗ ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೆ. ಆವಾಗ 1 ರೂ.ಗೆ ಅಕ್ಕಿ ನೀಡುವಂತೆ ಸಲಹೆ ನೀಡಿದ್ದೆ. ಆಗ ದರ್ಪದಿಂದ ಮಾತಾಡಿದರು. ನನ್ನ ಹೇಳಿಕೆ ಸುಳ್ಳಾಗಿದ್ದರೆ ಧರ್ಮಸ್ಥಳಕ್ಕೆ ಅಥವಾ ಕುದ್ರೋಳಿಗೆ ಬಂದು ಆಣೆ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸವಾಲೆಸೆದರು.

ಗೊಂದಲ ವಿಚಾರವನ್ನು ಪಕ್ಷದ ವೇದಿಕೆಯಲ್ಲೇ ಚರ್ಚಿಸಬಹುದಲ್ಲವೇ? ಎಂಬ ನಾಯಕರ ಹೇಳಿಕೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, ನಾನು ಮೈಸೂರಿನಲ್ಲಿ ಪಕ್ಷದ ಕಾರ್ಯಕ್ರಮದಲ್ಲೇ ಸಲಹೆ ನೀಡಿದ್ದೆ. ಆದರೆ ಅದನ್ನು ಸ್ವೀಕರಿಸಲಿಲ್ಲ ಎಂದ ಪೂಜಾರಿ, ಪಕ್ಷನಿಷ್ಠೆಗೆ ನಾನು ಬದ್ಧ. ಒಂದು ವೇಳೆ ಪಕ್ಷ ನನ್ನನ್ನು ಹೊರಹಾಕಿದರೂ ನಾನು ತಿರುಗಿ ಬೀಳುವುದಿಲ್ಲ. ಪಕ್ಷದಲ್ಲೇ ಇರುತ್ತೇನೆ, ಎಸ್.ಎಂ. ಕೃಷ್ಣ, ಜಾಫರ್ ಶರೀಫ್ ರಂತಹ ಹಿರಿಯ ನಾಯಕರು ಪಕ್ಷದಿಂದ ದೂರವಾಗಿದ್ದು, ಇದೀಗ ಕುಮಾರ್ ಬಂಗಾರಪ್ಪ ಆ ಸಾಲಿನಲ್ಲಿದ್ದಾರೆ. ಇದು ಪಕ್ಷದೊಳಗಿನ ಅವ್ಯವಸ್ಥೆಯನ್ನು ತೋರಿಸುತ್ತದೆ. ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಮುಂದಿನ ದಿನಗಳು ಕಠಿಣವಾಗಲಿದೆ. ಸಿದ್ಧರಾಮಯ್ಯ ಇಂದಿರಾಗಾಂಧಿಯ ಬಗ್ಗೆ ಕೀಳಾಗಿ ಮಾತನಾಡಿದವರು. ಕುದ್ರೋಳಿ ಕ್ಷೇತ್ರಕ್ಕೆ ಬಾರದೆ ದಸರಾ ಸಂದರ್ಭ ದೇವರನ್ನೇ ಕಾಯಿಸಿದ ಅವರಿಗೆ ತಕ್ಕ ಶಾಸ್ತಿ ಸಿಕ್ಕೇ ಸಿಗುತ್ತದೆ ಎಂದರು.

 ಶಾಸಕ ಲೋಬೊರಿಗೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುವ ಬಗ್ಗೆ ಅನುಮಾನವಿದೆ ಎಂದು ಪತ್ರಕರ್ತರ ಮಾತಿಗ ಪ್ರತಿಕ್ರಿಯಿಸಿದ ಪೂಜಾರಿ, ಟಿಕೆಟ್ ಗೆಲ್ಲುವವರಿಗಲ್ಲದೆ ಸೋಲುವವರಿಗೆ ಕೊಡುತ್ತಾರೆಯೇ? ಐವನ್‌ಗೆ ನೀಡಿದರೆ ಕಾಂಗ್ರೆಸ್ ಸೋಲಲಿದೆ ಎಂಬ ಭವಿಷ್ಯ ನುಡಿದರು.

ಇತ್ತೀಚೆಗೆ ನಿಧನರಾದ ಬಿಲ್ಲವ ಮುಖಂಡ, ಬೆಂಗಳೂರು ಬಿಲ್ಲವ ಸಂಘದ ಅಧ್ಯಕ್ಷ ನಾರಾಯಣ ಸ್ವಾಮಿ ಹೆಸರನ್ನು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿರುವ ಪುಷ್ಕರಿಣಿಗೆ ನಾಮಕರಣ ಮಾಡಲಾಗುವುದು ಎಂದು ಪೂಜಾರಿ ಹೇಳಿದರು.

ಪುಷ್ಕರಿಣಿ ವ್ಯಕ್ತಿಯ ಹೆಸರಿಡುವುದು ಎಷ್ಟು ಸೂಕ್ತ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಪೂಜಾರಿ, ನಾನು ದೇಶದ ನಾನಾ ಕಡೆ ಸುತ್ತಿದ್ದೇನೆ. ತಮಿಳುನಾಡು ಸೇರಿದಂತೆ ದೇಶದ ಹಲವು ಕಡೆ ದೇವಳದ ಕೆರೆಗಳಿಗೆ ವ್ಯಕ್ತಿಗಳ ಹೆಸರು ಇಡಲಾಗಿದೆ. ಈ ನಿಟ್ಟಿನಲ್ಲಿ ಕುದ್ರೋಳಿ ಕ್ಷೇತ್ರ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸಿದ ನಾರಾಯಣಸ್ವಾಮಿಯ ಹೆಸರನ್ನು ಫೆ.19ರಂದು ಸಂಜೆ 5 ಗಂಟೆಗೆ ಪುಷ್ಕರಿಣಿ, ಹೂದೋಟಕ್ಕೆ ನಾಮಕರಣ ಮಾಡಲು ತೀರ್ಮಾನಿಸಲಾಗಿದೆ ಎಂದರು.

 ಸುದ್ದಿಗೋಷ್ಠಿಯಲ್ಲಿ ಕುದ್ರೋಳಿ ದೇವಳದ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಟ್ರಸ್ಟಿ ಮಹೇಶ್ಚಂದ್ರ, ರವಿಶಂಕರ್ ಮಿಜಾರು, ಉದ್ಯಮಿ ಗಂಗಾಧರ ಅಮೀನ್ ನಾಸಿಕ್, ಕರುಣಾಕರ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚೆಗೆ ನಿಧನರಾದ ಪತ್ರಕರ್ತ ಚೇತನ್‌ರಾಂ ಇರಂತಕಜೆಯ ಕುಟುಂಬ ಸದಸ್ಯೆಯ ಹೆಸರಿಗೆ 50 ಸಾವಿರ ರೂ.ಚೆಕ್ ಬರೆದು ಹಸ್ತಾಂತರಿಸಿದರು.

ಈ ಸಂದರ್ಭ ಮಾತನಾಡಿದ ಪೂಜಾರಿ, ಆತುರ ಮತ್ತು ಭಾವೋದ್ವೇಗಕ್ಕೆ ಒಳಗಾಗಿ ನಾನು ಪತ್ರಕರ್ತನ ಕುಟುಂಬಕ್ಕೆ ಪ್ರತಿ ತಿಂಗಳು 50 ಸಾವಿರ ರೂ.ಸಹಾಯ ನೀಡುವುದಾಗಿ ಘೋಷಿಸಿದ್ದೆ. ಆದರೆ ಅಷ್ಟೊಂದು ಮೊತ್ತ ಕೊಡಲು ನನಗೆ ಸಾಧ್ಯವಿಲ್ಲ. ಈಗ ಪ್ರತಿ ತಿಂಗಳು ಬರುತ್ತಿರುವ 50 ಸಾವಿರ ರೂ. ಪಿಂಚಣಿಯಲ್ಲಿ 30,000 ರೂ. ನೇರವಾಗಿ ಆಶ್ರಮಗಳಿಗೆ ಸಂದಾಯವಾಗುತ್ತಿದೆ. ಇದನ್ನೆಲ್ಲ ಯೋಚನೆ ಮಾಡದೆ, ರಾಜಕೀಯ ಜೀವನದಲ್ಲಿ ಮೊದಲ ಬಾರಿ ತಪ್ಪಿ ಮಾತನಾಡಿದ್ದೇನೆ. ಅವರ ಕುಟುಂಬ, ಸಾರ್ವಜನಿಕರಲ್ಲಿ ಈ ಬಗ್ಗೆ ಕ್ಷಮೆಯಾಚಿಸುತ್ತೇನೆ. ಆದುದರಿಂದ ಏಕಗಂಟಿನಲ್ಲಿ 50 ಸಾವಿರ ರೂ. ಚೆಕ್ ನೀಡುತ್ತಿದ್ದೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X