Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೌಶಲ್ಯ ಚಾಣಾಕ್ಷತೆ ವೃದ್ಧಿಗೆ ಬಾಲ್‌...

ಕೌಶಲ್ಯ ಚಾಣಾಕ್ಷತೆ ವೃದ್ಧಿಗೆ ಬಾಲ್‌ ಬ್ಯಾಡ್ಮಿಂಟನ್ ಪೂರಕ : ಅಭಯಚಂದ್ರ

62ನೇ ರಾಷ್ಟ್ರೀಯ ಸೀನಿಯರ್ ಬಾಲ್‌ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ18 Feb 2017 8:04 PM IST
share
ಕೌಶಲ್ಯ ಚಾಣಾಕ್ಷತೆ ವೃದ್ಧಿಗೆ ಬಾಲ್‌ ಬ್ಯಾಡ್ಮಿಂಟನ್ ಪೂರಕ : ಅಭಯಚಂದ್ರ

ಮೂಡುಬಿದಿರೆ, ಫೆ.18: ಎಂ.ಕೆ. ಅನಂತರಾಜ್ ಅವರ ಸ್ಮರಣಾರ್ಥ 62ನೇ ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ್ನು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮೈದಾನದಲ್ಲಿ ಉದ್ಘಾಟಿಸಲಾಯಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಕರ್ನಾಟಕ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ನಡೆಯುತ್ತಿರುವ ಈ ರಾಷ್ಟ್ರೀಯ ಪಂದ್ಯಾವಳಿಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಭಯಚಂದ್ರ ಜೈನ್ ಮಾತನಾಡಿ, ‘ಸಾಕಷ್ಟು ಚಾಣಕ್ಷತೆ ಬೇಡುವ ಕ್ರೀಡೆ ಬಾಲ್ ಬ್ಯಾಡ್ಮಿಂಟನ್. ಈ ಕ್ರೀಡೆಗೆ ಸಾಕಷ್ಟು ಇತಿಹಾಸವಿದೆ. ಕ್ರೀಡಾ ಕ್ಷೇತ್ರದಲ್ಲಿ ಶಟಲ್ ಬ್ಯಾಡ್ಮಿಂಟನ್ ಯುಗ ಆರಂಭದ ನಂತರ ಬಾಲ್ ಬ್ಯಾಡ್ಮಿಂಟನ್ ತನ್ನ ಮೊದಲ ಆಕರ್ಷಣೆ ಕಳೆದುಕೊಂಡಿತ್ತಾದರೂ ತನ್ನದೇ ಮಹತ್ವವನ್ನು ಉಳಿಸಿಕೊಂಡು ಬಂದಿದೆ. ಕ್ರೀಡಾಳುಗಳ ಕೌಶಲ್ಯತೆಯನ್ನು ವೃದ್ಧಿಸುವ ಬಾಲ್ ಬ್ಯಾಡ್ಮಿಂಟನ್ ಮತ್ತೆ ಮುಖ್ಯ ವಾಹಿನಿಗೆ ಬರುವಂತಾಗಬೇಕು. ಇಂತಹ ಪಂದ್ಯಾವಳಿಗಳು ಕ್ರೀಡೆಯ ಜನಪ್ರಿಯತೆಯನ್ನು ಹೆಚ್ಚಿಸುವಲ್ಲಿ ಪೂರಕ ಎಂದರು.

ಭಾರತೀಯ ಬಾಲ್ ಬ್ಯಾಡ್ಮಿಂಟನ್ ಫೆಡರೇಶನ್‌ನ ಕಾರ್ಯದರ್ಶಿ ರಾಜಾರಾವ್ ಮಾತನಾಡಿ, ಕ್ರೀಡಾಳುಗಳ ಬೇಡಿಕೆಯನ್ನು ಈಡೇರಿಸಲು ಸಂಸ್ಥೆ ಶ್ರಮಿಸುತ್ತಿದೆ. ಎಲ್ಲಾ ಅವಶ್ಯಕತೆಗಳನ್ನು ಒಂದೇ ಬಾರಿಗೆ ಪೂರೈಸದಿದ್ದರೂ ಹಂತ ಹಂತವಾಗಿ ಕ್ರೀಡಾರ್ಥಿಗಳು ಬೆಳೆಯಲು ಅವಕಾಶ ಮಾಡಿಕೊಡಲಾಗುತ್ತದೆ ಎಂದರು.

ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಯುಪಿಸಿಎಲ್ ನಂದಿಕೂರು ಘಟಕದ ಕಾರ್ಯನಿರ್ವಹನಾ ನಿರ್ದೇಶಕ ಸಿಇಒ ಕಿಶೋರ್ ಆಳ್ವ, ಕರ್ನಾಟಕ ಬಾಲ್‌ಬ್ಯಾಡ್ಮಿಂಟನ್ ಅಸೋಸಿಯೇಶನ್‌ನ ಕಾರ್ಯದರ್ಶಿ ದಿನೇಶ್, ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಮೊಹಮ್ಮದ್ ಇಲ್ಯಾಸ್, ಅನಿವಾಸಿ ಭಾರತೀಯ ಸರ್ವೋತ್ತಮ ಶೆಟ್ಟಿ, ವಿವಿಧ ತಂಡಗಳ ಕೋಚ್‌ಗಳು ಹಾಗೂ ರೆಫರಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.

ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಸ್ವಾಗತಿಸಿದರು. ಸತೀಶ್ ಬೆಂಗಳೂರು ಕಾರ್ಯಕ್ರಮ ನಿರೂಪಿಸಿದರು.

ಆಕರ್ಷಕ ಮೆರವಣಿಗೆ:
62ನೇ ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದೆಹಲಿ, ಜಮ್ಮು ಕಾಶ್ಮೀರ, ಹರಿಯಾಣ, ಪಂಜಾಬ್, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳ 30 ತಂಡಗಳು ಭಾಗವಹಿಸಿವೆ. ಉದ್ಘಾಟನೆಗೂ ಮೊದಲು ನಡೆದ ಪಥಸಂಚಲನದಲ್ಲಿ ಪ್ರತೀ ತಂಡದ ಸದಸ್ಯರು ತಮ್ಮ ಜೆರ್ಸಿಗಳನ್ನು ಧರಿಸಿ ಸಾಗಿಬಂದದ್ದು ಆಕರ್ಷಕವಾಗಿತ್ತು.

ಪಥಸಂಚಲನದಲ್ಲಿ ಕ್ರೀಡಾಪಟುಗಳಿಗೆ ಎನ್‌ಸಿಸಿಯ ಆರ್ಮಿ, ನೇವಿ ಹಾಗೂ ಏರ್‌ಫೋರ್ಸ್ ಕೆಡೆಟ್‌ಗಳು, ಸ್ಕೌಟ್ಸ್ ಗೈಡ್ಸ್, ಆಳ್ವಾಸ್ ಬಿಪಿಎಡ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ದತ್ತು ಶಿಕ್ಷಣ ಯೋಜನೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಕ್ರೀಡಾ ವಿದ್ಯಾರ್ಥಿಗಳು ಸಾಥ್ ನೀಡಿದರು.

ಭಾರತ ಹಾಗೂ ಕರ್ನಾಟಕದ ಜಾನಪದ ಕಲೆಯನ್ನು ಬಿಂಬಿಸುವ ಕೊಂಬು, ಚೆಂಡೆ, ಮಣಿಪುರದ ದೋಲ್ ಚಲಂ, ಶ್ರೀಲಂಕದ ಜಾನಪದ ಕಲಾತಂಡ ಹಾಗೂ ಡೊಳ್ಳುಕುಣಿತದ ತಂಡಗಳೂ ಭಾಗವಹಿಸಿ ಪಥಸಂಚಲನದ ಅಂದವನ್ನು ಹೆಚ್ಚಿಸಿದವು. ರಾಷ್ಟ್ರಮಟ್ಟದ 33 ಪುರುಷರ ಹಾಗೂ ಮಹಿಳೆಯರ 29 ತಂಡಗಳ ಕ್ರೀಡಾಪಟುಗಳು ಪಥಸಂಚಲನದಲ್ಲಿ ಪಾಲ್ಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X