Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 150 ವರ್ಷಗಳಿಂದ ಸುಪ್ತವಾಗಿದ್ದ ಭಾರತದ...

150 ವರ್ಷಗಳಿಂದ ಸುಪ್ತವಾಗಿದ್ದ ಭಾರತದ ಏಕೈಕ ಜೀವಂತ ಜ್ವಾಲಾಮುಖಿ ಮತ್ತೆ ಚುರುಕು

ವಾರ್ತಾಭಾರತಿವಾರ್ತಾಭಾರತಿ18 Feb 2017 11:41 PM IST
share

ಪಣಜಿ, ಫೆ.18: ಸುಮಾರು 150 ವರ್ಷಗಳಿಂದ ಸುಪ್ತವಾಗಿದ್ದು ಆ ಬಳಿಕ 1991ರಲ್ಲಿ ಕ್ರಿಯಾಶೀಲತೆ ತೋರಿಸಲು ಆರಂಭಿಸಿದ್ದ, ಅಂಡಮಾನ್ ಮತ್ತು ನಿಕೊಬಾರ್ ದ್ವೀಪದಲ್ಲಿರುವ ಭಾರತದ ಏಕೈಕ ಜೀವಂತ ಜ್ವಾಲಾಮುಖಿ ಇದೀಗ ಚುರುಕಾಗಿದ್ದು ನಿರಂತರವಾಗಿ ಬೂದಿ ಮತ್ತು ಲಾವಾ ಕಾರಲು ಆರಂಭಿಸಿದೆ ಎಂದು ಗೋವಾದಲ್ಲಿರುವ ರಾಷ್ಟ್ರೀಯ ಸಾಗರವಿಜ್ಞಾನ ಅಕಾಡಮಿಯ (ಎನ್‌ಐಒ) ಸಂಶೋಧಕರು ತಿಳಿಸಿದ್ದಾರೆ. ಅಂಡಮಾನ್ ಮತ್ತು ನಿಕೊಬಾರ್ ದ್ವೀಪದಲ್ಲಿರುವ, ಪೋರ್ಟ್‌ಬ್ಲೇರ್‌ನಿಂದ ಈಶಾನ್ಯಕ್ಕೆ 140 ಕಿ.ಮೀ ದೂರವಿರುವ ಪರ್ವತದಿಂದ ಜ್ವಾಲಾಮುಖಿ ಮತ್ತೆ ಹೊರಚಿಮ್ಮಲು ಆರಂಭವಾಗಿದೆ. ಸುಮಾರು 150 ವರ್ಷಗಳಿಂದ ಸ್ತಬ್ಧವಾಗಿದ್ದ ಈ ಜ್ವಾಲಾಮುಖಿ 1991ರಲ್ಲಿ ಕ್ರಿಯಾಶೀಲಗೊಂಡಿದ್ದು ಆ ಬಳಿಕ ಆಗಿಂದಾಗ್ಗೆ ತನ್ನ ಚಟುವಟಿಕೆ ತೋರ್ಪಡಿಸುತ್ತಿದೆ ಎಂದು ಅಕಾಡಮಿಯ ಪ್ರಕಟಣೆ ತಿಳಿಸಿದೆ. 2017ರ ಜನವರಿ 23ರ ಅಪರಾಹ್ನ ವಿಜ್ಞಾನಿಗಳ ತಂಡವೊಂದು ಸಿಎಸ್‌ಐಆರ್-ಎನ್‌ಐಒ ದ ಸಂಶೋಧನಾ ನೌಕೆ ಆರ್.ವಿ. ಸಿಂಧುಸಂಕಲ್ಪದಲ್ಲಿ ಅಂಡಮಾನ್‌ನ ಈ ಪರ್ವತದ ಬಳಿ ಸಂಶೋಧನಾ ಕಾರ್ಯದಲ್ಲಿ ನಿರತರಾಗಿದ್ದಾಗ ಏಕಾಏಕಿ ಈ ಅಗ್ನಿಪರ್ವತ ಬೂದಿಯನ್ನು ಕಾರತೊಡಗಿತು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ತಕ್ಷಣ ತಂಡದವರು ಅಲ್ಲಿಂದ ಸುಮಾರು 1 ಮೈಲಿನಷ್ಟು ದೂರಕ್ಕೆ ತೆರಳಿ, ಜ್ವಾಲಾಮುಖಿಯನ್ನು ವೀಕ್ಷಿಸಿದರು. ಐದು-ಹತ್ತು ನಿಮಿಷಕ್ಕೊಮ್ಮೆ ಸಣ್ಣ ಸಣ್ಣ ಅಧ್ಯಾಯದಂತೆ ಈ ಬೂದಿಯುಗುಳುವ ಕಾರ್ಯ ಮುಂದುವರಿಯಿತು. ಹಗಲು ಹೊತ್ತಿನಲ್ಲಿ ಮಾತ್ರ ಬೂದಿಯ ಮೋಡಗಳು ಗೋಚರಿಸುತ್ತವೆ ಎಂದು ಅವರು ತಿಳಿಸಿದ್ದಾರೆ. ಸೂರ್ಯಾಸ್ತದ ವೇಳೆ ಕೆಂಪಗಿನ ಲಾವಾರಸ ಕಾರಂಜಿಯಂತೆ ಮೇಲಕ್ಕೆ ಚಿಮ್ಮಿ, ಅಗ್ನಿಪರ್ವತದ ಬುಡದುದ್ದಕ್ಕೂ ಹರಿದು ಬಂತು. 2017ರ ಜನವರಿ 26ರಂದು ಮತ್ತೊಮ್ಮೆ ಈ ಅಗ್ನಿಪರ್ವತದ ಕಡೆಗೆ ತೆರಳಿದಾಗಲೂ ಅಗ್ನಿಪರ್ವತದಿಂದ ನಿರಂತರ ಸ್ಫೋಟದ ಸದ್ದು ಕೇಳಿ ಬರುತ್ತಿತ್ತು ಮತ್ತು ಹೊಗೆ ರಭಸದಿಂದ ಚಿಮ್ಮುತ್ತಿತ್ತು. ಈ ಪ್ರದೇಶ ವ್ಯಾಪ್ತಿಯಿಂದ ಸಂಗ್ರಹಿಸಿದ ನೀರಿನ ಸ್ಯಾಂಪಲ್ ಪರೀಕ್ಷಿಸಿದಾಗ ಇದು ಜ್ವಾಲಾಮುಖಿ ವಿಸರ್ಜನೆಯ ಅಂಶವನ್ನು ಹೊಂದಿರುವುದು ಸ್ಪಷ್ಟವಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X