ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡ್ಗಿಚ್ಚು: ಬೆಂಕಿ ನಂದಿಸಲು ಹೋದ ಅರಣ್ಯ ಸಿಬ್ಬಂದಿ ಸಜೀವ ದಹನ
.jpg)
ಗುಂಡ್ಲುಪೇಟೆ, ಫೆ.18: ಬಂಡೀಪುರ ಹುಲಿ ಯೋಜನೆ ವ್ಯಾಪ್ತಿಯ ಕಲ್ಕೆರೆ ಅರಣ್ಯ ವಲಯದಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮವಾಗಿ ಸುಮಾರು 350 ಎಕರೆಗೂ ಹೆಚ್ಚಿನ ಅರಣ್ಯ ಸಂಪತ್ತು ಭಸ್ಮವಾಗಿದ್ದು, ಬೆಂಕಿ ನಂದಿಸಲು ಹೋದ ಅರಣ್ಯ ಸಿಬ್ಬಂದಿಯೊಬ್ಬರು ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಶನಿವರ ಜರಗಿದೆ.
ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕಲ್ಕೆರೆ ವಲಯಕ್ಕೆ ಸೇರಿದ ಮಾರಿಗುಡಿ ಸಮೀಪದಲ್ಲಿ ಕಿಡಿಗೇಡಿಗಳು 5 ಕಡೆಗಳಲ್ಲಿ ಕಾಡಿಗೆ ಬೆಂಕಿ ಹಚ್ಚಿದ್ದ ಪರಿಣಾಮವಾಗಿ ಅರಣ್ಯ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿದೆ ಎನ್ನಲಾಗಿದ್ದು, ಬಂಡೀಪುರ, ಮದ್ದೂರು, ಮೂಲೆಹೊಳೆ, ಗೋಪಾಲಸ್ವಾಮಿ ಬೆಟ್ಟವಲಯದ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು.
ಈ ವೇಳೆ ಬೆಂಕಿ ನಂದಿಸುವ ಪ್ರಯತ್ನದಲ್ಲಿದ್ದ ಅರಣ್ಯ ರಕ್ಷಕ ಮುರುಗಪ್ಪ(30) ಸಜೀವವಾಗಿ ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಸಾವನ್ನಪ್ಪಿದ್ದಾರೆಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
Next Story





