Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭುಗಿಲೆದ್ದ ರೆಡ್ಡಿ-ಶ್ರೀರಾಮುಲು ನಡುವಣ...

ಭುಗಿಲೆದ್ದ ರೆಡ್ಡಿ-ಶ್ರೀರಾಮುಲು ನಡುವಣ ವೈಮನಸ್ಸು : ಮಾಜಿ ಸಚಿವ ಕರುಣಾಕರ ರೆಡ್ಡಿ ವಿರುದ್ಧ ಜಾತಿ ನಿಂದನೆ ಕೇಸ್

ವಾರ್ತಾಭಾರತಿವಾರ್ತಾಭಾರತಿ19 Feb 2017 8:03 PM IST
share
ಭುಗಿಲೆದ್ದ ರೆಡ್ಡಿ-ಶ್ರೀರಾಮುಲು ನಡುವಣ ವೈಮನಸ್ಸು : ಮಾಜಿ ಸಚಿವ ಕರುಣಾಕರ ರೆಡ್ಡಿ ವಿರುದ್ಧ ಜಾತಿ ನಿಂದನೆ ಕೇಸ್

ಬಳ್ಳಾರಿ, ಫೆ.19: ಮಾಜಿ ಸಚಿವ ಕರುಣಾಕರ ರೆಡ್ಡಿ ಹಾಗೂ ಅವರ ಭಾಮೈದ ವಿಶ್ವನಾಥ ರೆಡ್ಡಿ ವಿರುದ್ಧ ಜಾತಿ ನಿಂದನೆ ದೂರೊಂದು ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮಾಜಿ ಸಚಿವ ಶ್ರೀರಾಮುಲು ಅವರ ಆಪ್ತ ಎನ್ನಲಾದ ಬಳ್ಳಾರಿಯ ಹವಂಬಾವಿ ಗ್ರಾಮದ ನಾಗಪ್ಪ ಈ ದೂರನ್ನು ನೀಡಿದ್ದಾರೆ. ಈ ಮೂಲಕ ಗಾಲಿ ಜನಾರ್ದನರೆಡ್ಡಿ ಸಹೋದರ, ಮಾಜಿ ಸಚಿವ ಕರುಣಾಕರ ರೆಡ್ಡಿ ಹಾಗೂ ಸಂಸದ ಶ್ರೀರಾಮುಲು ನಡುವಣ ವೈಮನಸ್ಸು ಭುಗಿಲೆದ್ದಿದ್ದಂತಾಗಿದೆ.

ಬಳ್ಳಾರಿ ಗ್ರಾಮೀಣ ಠಾಣಾ ಪೊಲೀಸರು, ರವಿವಾರ ಕರುಣಾಕರ ರೆಡ್ಡಿ ಮತ್ತು ವಿಶ್ವನಾಥ ರೆಡ್ಡಿ ವಿರುದ್ಧ ಎಸ್ಸಿ-ಎಸ್ಟಿ ಕಾಯ್ದೆ ಸೇರಿದಂತೆ ಇನ್ನಿತರೆ ಸೆಕ್ಷನ್ ಅಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ಪೊಲೀಸ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಾಗಪ್ಪ ದೂರಿನ ವಿವರ: ಹವಂಬಾವಿ ಗ್ರಾಮದ ಆಂಜನೇಯ ದೇವಸ್ಥಾನದ ಬಳಿಯೇ ಕರುಣಾಕರ ರೆಡ್ಡಿ ನಿವಾಸವಿದ್ದು, ಇದೇ ಮಾರ್ಗದಲ್ಲಿ ನಾನು ಮತ್ತು ವಾಲ್ಮೀಕಿ ಜನಾಂಗದ ಟಿ.ಸತ್ಯನಾರಾಯಣ ಸೇರಿ ಪ್ರಮುಖರು ಓಡಾಡುವಾಗ ಕರುಣಾಕರ ರೆಡ್ಡಿ ಮತ್ತು ಭಾಮೈದ ವಿಶ್ವನಾಥ ರೆಡ್ಡಿ ಇಬ್ಬರು ಸೇರಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನಾವು ಹೋಗಲಿ ಬಿಡು ಎಂದು ಸುಮ್ಮನಿದ್ದೆವು.

 ಆದರೆ, ಫೆ.9ರ ಗುರುವಾರ ರಾತ್ರಿ 7ಗಂಟೆ ಸುಮಾರಿಗೆ ಸಮುದಾಯದ ಮುಖಂಡರೊಂದಿಗೆ ಹೋಗುತ್ತಿದ್ದ ವೇಳೆ 'ಸಣ್ಣ ಜಾತಿ ನನ್ನ ಮಕ್ಕಳೇ, ಇಲ್ಲಿ ತಿರುಗಾಡ ಬೇಡಿ, ಎಲ್ಲರೂ ಇಲ್ಲಿಯೇ ತಿರುಗಾಡುತ್ತೀರಿ' ಎಂದು ಕರುಣಾಕರ ರೆಡ್ಡಿ ಮತ್ತು ಭಾಮೈದ ವಿಶ್ವನಾಥ ರೆಡ್ಡಿ ಇಬ್ಬರು ಸೇರಿಕೊಂಡು ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿದ್ದಾರೆಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ನಾಗಪ್ಪ ಉಲ್ಲೇಖ ಮಾಡಿದ್ದಾರೆ.

 ರಾಮುಲು ವಿರುದ್ಧ ಕೋರ್ಟ್ ಮೇಟ್ಟಿಲೆರಿದ್ದ ರೆಡ್ಡಿ: ಬಳ್ಳಾರಿ ನಗರದ ಸುಷ್ಮಾ ಸ್ವರಾಜ್ ಕಾಲನಿಯಲ್ಲಿರುವ ನಿವೇಶನಗಳ ಮಾಲಕತ್ವದ ವಿವಾದಕ್ಕೆ ಸಂಬಂಧ ಸಂಸದ ಶ್ರೀರಾಮುಲು ಸೇರಿ ಮೂವರ ವಿರುದ್ಧ ಮಾಜಿ ಸಚಿವ ಕರುಣಾಕರ ರೆಡ್ಡಿ ಇತ್ತೀಚೆಗೆ ಬಳ್ಳಾರಿಯ ಸಿಜೆಎಂ ನ್ಯಾಯಾಲಯದಲ್ಲಿ ಆಸ್ತಿ ಮಾಲಕತ್ವದ ಘೋಷಣೆಯ ದಾವೆ ಹೂಡಿದ್ದರು. ಇದಕ್ಕೆ ಸಂಬಂಧಿಸಿ ನ್ಯಾಯಾಲಯ ಸಂಸದ ಬಿ.ಶ್ರೀೀರಾಮುಲು ಸೇರಿ ಮೂವರಿಗೆ ಸಮನ್ಸ್ ಜಾರಿಗೊಳಿಸಿದೆ ಎನ್ನಲಾಗಿದ್ದು, ಇದರ ವಿರುದ್ಧವಾಗಿ ಕರುಣಾಕರ ರೆಡ್ಡಿ ವಿರುದ್ಧ ರಾಮುಲು ಆಪ್ತರೊಬ್ಬರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.

ಸಣ್ಣ ಜಾತಿ ನನ್ನ ಮಕ್ಕಳೇ, ಇಲ್ಲೇ ತಿರುಗಾಡುತ್ತೀರಿ..!

'ಸಣ್ಣ ಜಾತಿ ನನ್ನ ಮಕ್ಕಳೇ, ಇಲ್ಲಿ ತಿರುಗಾಡ ಬೇಡಿ, ಎಲ್ಲರೂ ಇಲ್ಲಿಯೇ ತಿರುಗಾಡುತ್ತೀರಿ'. ಹೀಗೆ, ಇನ್ನಿತರೆ ಅವಾಚ್ಯ ಶಬ್ದಗಳಿಂದ ಮಾಜಿ ಸಚಿವ ಕರುಣಾಕರ ರೆಡ್ಡಿ ಮತ್ತು ಭಾಮೈದ ವಿಶ್ವನಾಥ ರೆಡ್ಡಿ ಇಬ್ಬರು ಸೇರಿಕೊಂಡು ಜಾತಿನಿಂದನೆ ಮಾಡಿದ್ದಾರೆ. ಈ ಸಂಬಂಧ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು'

 ನಾಗಪ್ಪ ದೂರುದಾರ, ಸಂಸದ ಶ್ರೀರಾಮುಲು ಆಪ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X