Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ.ಮೊಸುಲ್ ಮೇಲೆ ಇರಾಕಿ ಪಡೆಗಳ ದಾಳಿ ಆರಂಭ...

ಪ.ಮೊಸುಲ್ ಮೇಲೆ ಇರಾಕಿ ಪಡೆಗಳ ದಾಳಿ ಆರಂಭ : 3.50 ಲಕ್ಷಕ್ಕೂ ಅಧಿಕ ಮಕ್ಕಳ ಜೀವ ಅಪಾಯದಲ್ಲಿ

‘ಸೇವ್ ದಿ ಚಿಲ್ಡ್ರನ್’ ಕಳವಳ

ವಾರ್ತಾಭಾರತಿವಾರ್ತಾಭಾರತಿ19 Feb 2017 9:47 PM IST
share
ಪ.ಮೊಸುಲ್ ಮೇಲೆ ಇರಾಕಿ ಪಡೆಗಳ ದಾಳಿ ಆರಂಭ : 3.50 ಲಕ್ಷಕ್ಕೂ ಅಧಿಕ ಮಕ್ಕಳ ಜೀವ ಅಪಾಯದಲ್ಲಿ

ಲಂಡನ್,ಫೆ.19: ಬಂಡುಕೋರರ ನಿಯಂತ್ರಣದಲ್ಲಿರುವ ಪಶ್ಚಿಮ ಮೊಸುಲ್ ಮೇಲೆ ಇರಾಕಿ ಪಡೆಗಳು ದಾಳಿಯನ್ನು ಆರಂಭಿಸಿರುವಂತೆಯೇ, , 3.50 ಲಕ್ಷಕ್ಕೂ ಅಧಿಕ ಮಂದಿ ಮಕ್ಕಳು ಈ ನಗರದಲ್ಲಿ ಸಿಕ್ಕಿಹಾಕಿಕೊಂಡಿದ್ದು, ಅವರ ಜೀವ ಅಪಾಯದಲ್ಲಿದೆಯೆಂದು ಅಂತಾರಾಷ್ಟ್ರೀಯ ಮಕ್ಕಳ ಸೇವಾಸಂಸ್ಥೆ ‘ಸೇವ್ ದಿ ಚಿಲ್ಡ್ರನ್’ ಎಚ್ಚರಿಕೆ ನೀಡಿದೆ.

‘‘ ಇರಾಕಿ ಪಡೆಗಳು ಹಾಗೂ ಅಮೆರಿಕ, ಬ್ರಿಟನ್ ಸೇರಿದಂತೆ ಅದರ ಮಿತ್ರಪಡೆಗಳು, ಈ ಮಕ್ಕಳನ್ನು ಹಾಗೂ ಅವರ ಕುಟುಂಬಗಳನ್ನು ರಕ್ಷಿಸಲು ತಮ್ಮಿಂದ ಸಾಧ್ಯವಾಗುವುದೆಲ್ಲವನ್ನೂ ಮಾಡಬೇಕಿದೆ. ಅವು ನಗರ ಒಳಭಾಗಕ್ಕೆ ನುಗ್ಗುವಾಗ ಶಾಲೆಗಳು, ಆಸ್ಪತ್ರೆಗಳು ಮತ್ತಿತರ ನಾಗರಿಕರ ಕಟ್ಟಡಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಲಂಡನ್ ಮೂಲದ ‘ಸೇವ್ ದಿ ಚಿಲ್ಡ್ರನ್ ’ ಸಂಸ್ಥೆಯ ನಿರ್ದೇಶಕ ವೌರಿಝಿಯೋ ಕ್ರಿವಾಲ್ಲೆರೊ ತಿಳಿಸಿದ್ದಾರೆ.

ಯುದ್ಧಗ್ರಸ್ತ ಮೊಸುಲ್‌ನಲ್ಲಿ ಐಸಿಸ್ ಉಗ್ರರಿಂದ ಹತ್ಯೆಯ ಭೀತಿ, ನೆಲಬಾಂಬ್‌ಗಳು ಹಾಗೂ ಹೊಂಚುದಾಳಿಗಳ ಅಪಾಯವನ್ನು ಹೆಜ್ಜೆಹೆಜ್ಜೆಗೆ ಎದುರಿಸುತ್ತಿರುವ ನಿವಾಸಿಗಳಿಗೆ ಆ ನಗರದಿಂದ ಪರಾರಿಯಾಗಲು ಸಾಧ್ಯವಾಗುತ್ತಿಲ್ಲವೆಂದವರು ಹೇಳಿದ್ದಾರೆ. ಅಲ್ಲಿನ ನಿವಾಸಿಗಳು ಆಹಾರ, ನೀರು ಹಾಗೂ ಔಷಧಿಗಳ ಅಭಾವವನ್ನು ಕೂಡಾ ಎದುರಿಸುತ್ತಿದ್ದಾರೆಂದು ಕ್ರಿವಾಲ್ಲೆರೊ ತಿಳಿಸಿದ್ದಾರೆ.

‘‘ಪಶ್ಚಿಮ ಮೊಸುಲ್‌ನಲ್ಲಿರುವ ಮಕ್ಕಳ ಮುಂದಿರುವ ಎರಡು ವಿಷಾದಕರ ಆಯ್ಕೆಗಳು ಹೀಗಿವೆ. ಒಂದು ವೇಳೆ ಅಲ್ಲಿ ಅವರು ಉಳಿದುಕೊಂಡಲ್ಲಿ ಬಾಂಬ್‌ಗಳು, ಗುಂಡಿನ ಚಕಮಕಿ ಹಾಗೂ ಹಸಿವನ್ನು ಎದುರಿಸಬೇಕಾಗುತ್ತದೆ. ಒಂದು ವೇಳೆ ಅಲ್ಲಿಂದ ಪರಾರಿಯಾಗಲು ಬಯಸಿದಲ್ಲಿ ಅವರು ಮರಣದಂಡನೆ ಹಾಗೂ ಹೊಂಚುದಾಳಿಯ ಅಪಾಯವನ್ನು ಎದುರಿಸಬೇಕಾಗುವುದು’’ ಎಂದು ಕ್ರಿವಾಲ್ಲೆರೊ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

ಇರಾಕ್‌ನ ಎರಡನೆ ಅತಿ ದೊಡ್ಡ ನಗರವಾದ ಮೊಸುಲ್‌ನ್ನು ಐಸಿಸ್‌ನಿಂದ ವಿಮೋಚನೆಗೊಳಿಸಲು ಇರಾಕಿ ಪಡೆಗಳು ಕಳೆದ ನಾಲ್ಕು ತಿಂಗಳಿಂದ ಅಲ್ಲಿ ಸೇನಾಕಾರ್ಯಾಚರಣೆ ಯನ್ನು ನಡೆಸುತ್ತಿವೆ. ಮೊಸುಲ್ ನಗರದ ಮೇಲೆ ಇರಾಕ್ ಸೇನೆಯು ಅಕ್ಟೋಬರ್ 17ರಂದು ಆಕ್ರಮಣವನ್ನು ಆರಂಭಿಸಿತ್ತು. ಜನವರಿ 24ರಂದು ಅದು ಪೂರ್ವ ಮೊಸುಲ್ ಪ್ರದೇಶನ್ನು ಸಂಪೂರ್ಣ ವಿಮೋಚನೆಗೊಳಿಸಿರುವುದಾಗಿ ಘೋಷಿಸಿತ್ತು.

ಮೊಸುಲ್ ಪಶ್ಚಿಮಭಾಗದಲ್ಲಿರುವ ಬೀದಿಗಳು ಅತ್ಯಂತ ಕಿರಿದಾಗಿದ್ದು, ಸೇನಾವಾಹಗಳು ಸಂಚರಿಸುವುದು ಅಸಾಧ್ಯವಾಗಿದೆ. ಅಲ್ಲಿ ಫಿರಂಗಿ ಮತ್ತಿತರ ಸ್ಫೋಟಕ ಶಸ್ತ್ರಾಸ್ತ್ರಗಳ ದಾಳಿಯು ಅತ್ಯಂತ ಮಾರಣಾಂತಿಕವಾಗಲಿದೆ ಎಂದು ಸೇವ್ ದಿ ಚಿಲ್ಟ್ರನ್ ಆತಂಕ ವ್ಯಕ್ತಪಡಿಸಿದೆ. ಪಶ್ಚಿಮ ಮೊಸುಲ್‌ನಲ್ಲಿ 3.50 ಲಕ್ಷಕ್ಕೂ ಅಧಿಕ ಮಂದಿ 18 ವರ್ಷಕ್ಕಿಂತ ಕೆಳಗಿನ ವಯಸ್ಸಿನವರೆಂದು ಸೇವ್ ದಿ ಚಿಲ್ಟ್ರನ್ ಸಂಸ್ಥೆಯ ವಕ್ತಾರರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X