ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಮಂಗಳೂರು, ಫೆ.20: ರಾಜ್ಯ ಕಾಂಗ್ರೆಸ್ ಸರಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿರುವ ಬಿಜೆಪಿ ಇದರ ವಿರುದ್ಧ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆ ಅಂಗವಾಗಿ ದ.ಕ. ಜಿಲ್ಲಾಧಿಕಾರಿ ಕಚೇರಿಯೆದುರೂ ಇಂದು ಬೆಳಗ್ಗೆ ಪ್ರತಿಭಟನೆ ನಡೆಯಿತು.
ಸಂಸದ ನಳಿನ್ ಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಯೋಗೀಶ್ ಭಟ್, ಬಿ.ನಾಗರಾಜ ಶೆಟ್ಟಿ, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಅನ್ವರ್ ಮಾಣಿಪ್ಪಾಡಿ, ಜಯರಾಮ ಶೆಟ್ಟಿ, ಮೋನಪ್ಪ ಭಂಡಾರಿ, ಉಪಮೇಯರ್ ಸುಮಿತ್ರಾ ಕರಿಯಾ ಮತ್ತಿತರರು ಭಾಗವಹಿಸಿದ್ದರು.
Next Story





