ಶಿವಮೊಗ್ಗ: ಕಿರಾಣಿ ಅಂಗಡಿಗೆ ಬೆಂಕಿ, ಕಿಡಿಗೇಡಿಗಳ ದುಷ್ಕೃತ್ಯ ಶಂಕೆ
ಶಿವಮೊಗ್ಗ, ಫೆ. 20: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಇಂದಿರಾನಗರ ಬಡಾವಣೆಯಲ್ಲಿರುವ ಕಿರಾಣಿ ಅಂಗಡಿಯೊಂದಕ್ಕೆ ತಡರಾತ್ರಿ ಬೆಂಕಿ ಬಿದ್ದಿರುವ ಘಟನೆ ವರದಿಯಾಗಿದ್ದು, ಕಿಡಿಗೇಡಿಗಳ ದುಷ್ಕೃತ್ಯದ ಶಂಕೆ ವ್ಯಕ್ತಪಡಿಸಲಾಗಿದೆ.
ಶೋಭಾ ರವೀಶ್ ಎಂಬುವರ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





