Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೃಹತ್ ದಲಿತ-ಮುಸ್ಲಿಂ-ಬಹುಜನ ಜಾಥಾ

ಬೃಹತ್ ದಲಿತ-ಮುಸ್ಲಿಂ-ಬಹುಜನ ಜಾಥಾ

ವಾರ್ತಾಭಾರತಿವಾರ್ತಾಭಾರತಿ20 Feb 2017 11:47 PM IST
share

ತಿರುವನಂತಪುರಂ,ಫೆ.20: ಕೇರಳದ ಇತಿಹಾಸದಲ್ಲೇ ಅತ್ಯಂತ ಬೃಹತ್ ಮಟ್ಟದ ದಲಿತ-ಮುಸ್ಲಿಂ-ಬಹುಜನ ಪ್ರತಿಭಟನೆ, ‘ಚಲೋ ತಿರುವನಂತಪುರಂ’ ನಡೆಸಲು ರಾಜ್ಯದ 50 ಸಾಮಾಜಿಕ ಸಂಘಟನೆಗಳು ನಿರ್ಧರಿಸಿವೆ.

ಭೂರಹಿತ ದಲಿತರು, ಆದಿವಾಸಿಗಳು ಹಾಗೂ ಬಹುಜನ ಸಮುದಾಯಗಳ ಸಮಸ್ಯೆಗಳ ಬಗ್ಗೆ ಈ ಚಳವಳಿಯು ಸರಕಾರದ ಗಮನಸೆಳೆಯಲಿದೆ ಹಾಗೂ ಈ ಸಮುದಾಯಗಳನ್ನು ನಿರ್ದಿಷ್ಟ ಕಾಲನಿಗಳಲ್ಲಿ ನೆಲೆಗೊಳಿಸುವ ಪದ್ಧತಿಯನ್ನು ಕೈಬಿಡುವಂತೆಯೂ ಆಗ್ರಹಿಸಲಿದೆಯೆಂದು ಸಂಘಟಕರು ತಿಳಿಸಿದ್ದಾರೆ.
ಗುಜರಾತ್‌ನಲ್ಲಿ ನಡೆದ ಉನಾ ಚಳವಳಿ ಹಾಗೂ ಕರ್ನಾಟಕದಲ್ಲಿ ನಡೆದ ಉಡುಪಿ ಚಲೋ ಚಳವಳಿಯ ಮಾದರಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಎಪ್ರಿಲ್ 1ರಂದು ಕಾಸರಗೋಡಿನಲ್ಲಿ , ‘ಚಲೋ ತಿರುವನಂತಪುರಂ’ ರ್ಯಾಲಿ ಆರಂಭಗೊಳ್ಳಲಿದ್ದು ಮೇ 31ರಂದು ತಿರುವನಂತಪುರಂನಲ್ಲಿ ಸಮಾರೋಪಗೊಳ್ಳಲಿದೆ.
2007ರಲ್ಲಿ ಭೂರಹಿತರ ಬಂಡಾಯಕ್ಕೆ ಸಾಕ್ಷಿಯಾದ ಕೇರಳದ ಚೆಂಗರದಲ್ಲಿ ಈ ವರ್ಷದ ಜನವರಿ 29ರಂದು ನಡೆದ ಮುಷ್ಕರದ ವೇಳೆ ದಲಿತ ನಾಯಕ ಜಿಗ್ನೇಶ್ ಮೆವಾನಿ ತಿರುವನಂತಪುರಂ ಚಲೋ ನಡೆಸುವ ನಿರ್ಧಾರವನ್ನು ಪ್ರಕಟಿಸಿದ್ದರು.
‘‘ಕೇರಳ ಮಾದರಿಯ ಅಭಿವೃದ್ಧಿಯ ಹಿಂದೆ ನಡೆಯುವ ದಲಿತರ ಶೋಷಣೆಯನ್ನು ಬಯಲಿಗೆಳೆಯಲು ಕಾಲ ಈಗ ಸನ್ನಿಹಿತವಾಗಿದೆ. ಈ ಹೋರಾಟದಲ್ಲಿ ಎಡಪಂಥೀಯರು ಸೇರಿದಂತೆ ಸಮಾನಮನಸ್ಕರನ್ನು ಒಗ್ಗೂಡಿಸಲಾಗುವುದು’’ ಎಂದು ಜಿಗ್ನೇಶ್ ಘೋಷಿಸಿದ್ದರು.
ಕೇರಳವು ದೇಶದಲ್ಲೇ ಅತ್ಯಧಿಕ ಅಂದರೆ ಶೇ.94ರಷ್ಟು ಸಾಕ್ಷರತೆ, ಅಧಿಕ ಜೀವಿತಾವಧಿ ಹಾಗೂ ಭೂಸುಧಾರಣೆಯನ್ನು ಸಾಧಿಸಿದ ರಾಜ್ಯವೆಂಬ ದಾಖಲೆಯನ್ನು ನಿರ್ಮಿಸಿದೆ. ಆದಾಗ್ಯೂ, ಈ ಮಾದರಿಯಲ್ಲಿ ದಲಿತರು, ಆದಿವಾಸಿಗಳು ಹಾಗೂ ಮೀನುಗಾರ ಸಮುದಾಯಗಳು ಹೊರಗಿಡಲಾಗಿದೆಯೆಂದು ಟೀಕಿಸಲಾಗುತ್ತಿದೆ.
ಈ ಮಧ್ಯೆ ಚಲೋ ತಿರುವನಂತಪುರಂ ಚಳವಳಿಯು ದಲಿತ-ಮುಸ್ಲಿಂ-ಬಹುಜನ ಸಮುದಾಯಗಳ ಬೃಹತ್ ಒಕ್ಕೂಟ ರಚನೆಗೆ ನಾಂದಿಯಾಗುವ ನಿರೀಕ್ಷೆಯಿದೆ. ಈ ಮಧ್ಯೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಉಪಾಧ್ಯಕ್ಷ ಕುಟ್ಟಿ ಅಹ್ಮದ್ ಕುಟ್ಟಿ ಈ ಬಗ್ಗೆ ಹೇಳಿಕೆಯೊಂದನ್ನು ನೀಡಿ, ಚಲೋ ತಿರುವನಂತಪುರಂ ಯಶಸ್ವಿಯಾಗಲು ತಮ್ಮ ಪಕ್ಷವು ಸಕಲ ಸಹಕಾರ ನೀಡಲಿದೆಯೆಂದು ತಿಳಿಸಿದ್ದಾರೆ. ದಲಿತ-ಮುಸ್ಲಿಂ-ಬಹುಜನ ಏಕತೆಯು ಸಮಾನ ನ್ಯಾಯದ ಪರಿಕಲ್ಪನೆಯನ್ನು ಆಧರಿಸಿದೆಯೆಂದು ಭೂ ಅಧಿಕಾರ ಸಂರಕ್ಷಣಾ ಸಮಿತಿಯ ನಾಯಕರಲ್ಲೊಬ್ಬರಾದ ಸುನ್ನಿ ಎಂ. ಕಾಪಿಕ್ಕಾಡ್ ತಿಳಿಸಿದ್ದಾರೆ.ಮೂಲಭೂತವಾದ ಹಾಗೂ ಹಿಂದುತ್ವದ ಕಾರ್ಯಸೂಚಿಯ ವಿರುದ್ಧ ಜಾತಿ ವಿರೋಧಿ ಹಾಗೂ ಜಾತ್ಯತೀತ ಶಕ್ತಿಗಳಷ್ಟೇ ಹೋರಾಡಲು ಸಾಧ್ಯವೆಂದು ಅವರು ಹೇಳಿದ್ದಾರೆ.
ಆದರೆ ಈ ಬೃಹತ್ ಪ್ರತಿಭಟನಾ ರ್ಯಾಲಿಯ ಕುರಿತು ಇತ್ತೀಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಕೇರಳದ ಖ್ಯಾತ ಆದಿವಾಸಿ ಹಕ್ಕುಗಳ ಹೋರಾಟಗಾರ್ತಿ ಸಿ.ಕೆ.ಜಾನು ಗೈರುಹಾಜ ರಾಗಿದ್ದರು. ಆದರೆ ತನಗೆ ಈ ಚಳವಳಿಯಲ್ಲಿ ಭಾಗವಹಿಸುವುದಕ್ಕಾಗಿ ಯಾರೂ ತನ್ನನ್ನು ಸಂಪರ್ಕಿಸಿಲ್ಲವೆಂದು ಅವರು ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X