ಫೆ.25: ಹರತಾಳ ನಡೆಸಲು ಕರೆ
ಮಂಗಳೂರು, ಫೆ.20: ನಗರದಲ್ಲಿ ಫೆ.25ರಂದು ನಡೆಯುವ ಕೋಮು ಸೌಹಾರ್ದ ರ್ಯಾಲಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗಮಿಸುವುದನ್ನು ವಿರೋಧಿಸಿ ವಿಎಚ್‌ಪಿ, ಹಿಂದೂ ಜಾಗರಣ ವೇದಿಕೆ ಮತ್ತು ಬಜರಂಗದಳದಿಂದ ಹರತಾಳಕ್ಕೆ ಕರೆ ನೀಡಲಾಗಿದೆ ಎಂದು ವಿಎಚ್‌ಪಿ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಬಜರಂಗದಳದ ಪ್ರಾಂತ ಸಂಚಾಲಕ ಶರಣ್ ಪಂಪ್‌ವೆಲ್, ವಿಎಚ್‌ಪಿ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ, ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕ ಅಮಿತ್‌ಕುಮಾರ್, ಬಜರಂಗದಳದ ಜಿಲ್ಲಾ ಸಂಚಾಲಕ ಭುಜಂಗ ಕುಲಾಲ್ ಉಪಸ್ಥಿತರಿದ್ದರು.
Next Story





