ರಾಜೌರಿಯಲ್ಲಿ ಗುಂಡಿನ ಚಕಮಕಿ; ಓರ್ವ ಉಗ್ರನ ಹತ್ಯೆ

ಶ್ರೀನಗರ,ಫೆ. 21: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆಗಡಿ ಭದ್ರತಾಪಡೆ ಮತ್ತು ಉಗ್ರರ ನಡುವೆ ಸಂಭವಿಸಿದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರ ಬಲಿಯಾಗಿದ್ದಾನೆ.
ಭಾರತದೊಳಗೆ ನುಸುಳಲು ಯತ್ನಿಸಿದ ಉಗ್ರಗಾಮಿಗಳು ಮತ್ತು ಬಿಎಸ್ಎಫ್ 163 ಬ್ಯಾಟಲಿಯನ್ ಭದ್ರತಾ ಪಡೆ ಯೋಧರ ನಡುವೆ ರಾಜೌರಿಯ ಕೇರಿ ವಲಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಮೃತಪಟ್ಟಿದ್ದಾನೆ. ಇಬ್ಬರು ಉಗ್ರರು ಪರಾರಿಯಾಗಿದ್ದಾರೆ.
Next Story