ಇನ್ನು ಎಲ್ಲ ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಅಗ್ನಿಶಾಮಕ ಉಪಕರಣ : ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು, ಫೆ.21: ಇನ್ನು ಮುಂದೆ ಕೆಎಸ್ ಆರ್ ಟಿಸಿಯ ಎಲ್ಲ ಬಸ್ ಗಳಲ್ಲಿ ಅಗ್ನಿಶಾಮಕ ಉಪಕರಣವನ್ನು ಅಳವಡಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಗ್ನಿಶಾಮಕ ಉಪಕರಣ ಇರುತ್ತಿದ್ದರೆ ನಿನ್ನೆ ಬಸ್ ನಲ್ಲಿ ಕಾಣಿಸಿಕೊಂಡ ಭೀಕರ ಅಗ್ನಿದುರಂತವನ್ನು ತಕ್ಷಣ ಹತೋಟಿಗೆ ತರಲು ಸಾಧ್ಯವಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಅಗ್ನಿ ದುರಂತದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ಚಿಕಿತ್ಸೆಯ ವೆಚ್ಚ ಭರಿಸಲಾಗುವುದು ಮತ್ತು ಪರಿಹಾರ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಅಗ್ನಿ ದುರಂತಕ್ಕೆ ಕಾರಣ ಸ್ಪಷ್ಟಗೊಂಡಿಲ್ಲ. ಬಸ್ ನಲ್ಲಿ ಯಾವುದೇ ತೊಂದರೆ ಇರಲಿಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
Next Story