ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಶಾಲಾ ಮುಖ್ಯಸ್ಥರು ವಶಕ್ಕೆ

ಬೆಂಗಳೂರು, ಫೆ.21: ಮಾರತ್ ಹಳ್ಳಿಯ ನರ್ಸರಿ ಶಾಲೆಯೊಂದರಲ್ಲಿ ಮೂರರ ಹರೆಯದ ಮಗುವಿನ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಶಾಲಾ ಮುಖ್ಯಸ್ಥ ಕಿಂಗ್ ಸ್ಟನ್ ಎಂಬವರನ್ನು ಮಾರತ್ ಹಳ್ಳಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತಿರುವ ಶಾಲೆಯ ಸೂಪರ್ ವೈಸರ್ ಮಂಜುನಾಥ್ ನನ್ನು ಪೊಲೀಸರು ಬಂಧಿಸಿದ್ದಾರೆ
ಶಾಲೆಯ ಪ್ರಾಂಶುಪಾಲೆ ಡಾ.ವೀಣಾ ಅವರನ್ನು ಸಹ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಘಟನೆಯ ಬಗ್ಗೆ ನಿರ್ಲಕ್ಷ್ಯ ತೋರಿದ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳವಂತೆ ಶಾಲಾ ಮಕ್ಕಳ ಹೆತ್ತವರು ಆಗ್ರಹಿಸಿದ್ದಾರೆ.
Next Story





