Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಅಕ್ರಮ ಬಾಂಗ್ಲಾ ವಲಸಿಗನ ಬಂಧನ

ಮಡಿಕೇರಿ: ಅಕ್ರಮ ಬಾಂಗ್ಲಾ ವಲಸಿಗನ ಬಂಧನ

ವಾರ್ತಾಭಾರತಿವಾರ್ತಾಭಾರತಿ21 Feb 2017 8:47 PM IST
share
ಮಡಿಕೇರಿ: ಅಕ್ರಮ ಬಾಂಗ್ಲಾ ವಲಸಿಗನ ಬಂಧನ

ಮಡಿಕೇರಿ ಫೆ.21: ಕಾಫಿ ತೋಟಗಳೇ ಹೆಚ್ಚಾಗಿರುವ ಕೊಡಗು ಜಿಲ್ಲೆಗೆ ಕಾರ್ಮಿಕರಾಗಿ ದುಡಿಯಲು ಬಾಂಗ್ಲಾದೇಶದಿಂದಲು ಅಕ್ರಮ ವಲಸಿಗರು ಬರುತ್ತಿದ್ದಾರೆ ಎನ್ನುವ ಖಚಿತ ಮಾಹಿತಿಯನ್ನು ಅನುಸರಿಸಿದ ಜಿಲ್ಲಾ ಪೊಲೀಸರು ವಿರಾಜಪೇಟೆಯಲ್ಲಿ ಓರ್ವ ಬಾಂಗ್ಲಾದೇಶಿಗ ಹಾಗೂ ಆಶ್ರಯ ನೀಡಿದಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಂಗ್ಲಾ ಪ್ರಜೆ ಸಹರುಲ್ ಇಸ್ಲಾಂ ಹಾಗೂ ಈತನಿಗೆ ಆಶ್ರಯ ನೀಡಿದ ಪಶ್ಚಿಮ ಬಂಗಾಳದ ತಾರೀಫ್ ಶೇಖ್ ಬಂಧಿತ ಆರೋಪಿಗಳಾಗಿದ್ದು, ಇವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ.

ಫೆೆ.19 ರಂದು ರಾತ್ರಿ 8 ಗಂಟೆ ಸುಮಾರಿಗೆ ಬಾಂಗ್ಲಾದೇಶದ ಒಬ್ಬ ವ್ಯಕ್ತಿ ವೀರಾಜಪೇಟೆ ಪಟ್ಟಣದ ಮೊಗರಗಲ್ಲಿ ಬಳಿ ಇದ್ದಾನೆ ಎಂಬ ಖಚಿತ ಮಾಹಿತಿ ದೊರೆತ ಹಿನ್ನೆಲೆ ವೀರಾಜಪೇಟೆ ನಗರ ಪೊಲೀಸ್ ಠಾಣಾ ಅಧಿಕಾರಿ ಸಂತೋಷ್ ಕಶ್ಯಪ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಆತನನ್ನು ವಿಚಾರಣೆಗೆ ಒಳಪಡಿಸಿದಾಗ ತಾನು ಬಾಂಗ್ಲಾದೇಶಿಗನೆಂದು ಒಪ್ಪಿಕೊಂಡಿದ್ದಾನೆ.

ಸಹರುಲ್ ಇಸ್ಲಾಂ ಎಂಬ ಹೆಸರಿನ ಈತ ಬಾಂಗ್ಲಾ ದೇಶದ ಢಾಕಾ ರಾಜ್ಯದ ರಾಜಸೈ ಜಿಲ್ಲೆಯ ಗುದಗರಿ ಥಾನದ ಆಸರ್‌ದೋಹ ನಿವಾಸಿಯಾಗಿದ್ದಾನೆ. ಪಾಸ್ ಪೋರ್ಟ್ ಮತ್ತು ವೀಸಾದ ಬಗ್ಗೆ ವಿಚಾರಿಸಿದಾಗ ತನ್ನ ಬಳಿ ಯಾವುದೇ ದಾಖಲೆಗಳಿರುವುದಿಲ್ಲ. ಬಾಂಗ್ಲಾದಿಂದ ಕೂಲಿ ಕೆಲಸಕ್ಕಾಗಿ ಅಕ್ರಮವಾಗಿ ಭಾರತಕ್ಕೆ ನುಸುಳಿರುವುದಾಗಿ ಆತ ಹೇಳಿಕೊಂಡಿದ್ದಾನೆ.

ಈತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಕಳೆದ ಎರಡು ವರ್ಷಗಳಲ್ಲಿ ಕೂಲಿ ಕೆಲಸಕ್ಕೆಂದು ಮೂರನೇ ಬಾರಿ ಬಾಂಗ್ಲಾದೇಶದಿಂದ ಅಕ್ರಮವಾಗಿ ನುಸುಳಿಕೊಂಡು ಭಾರತಕ್ಕೆ ಬಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ಈತನ ವಿರುದ್ಧ ವಿದೇಶಿ ಕಾಯ್ದೆ 1946 ರ ಪ್ರಕಾರ ಪ್ರಕರಣ ದಾಖಲಿಸಿ ದಸ್ತಗಿರಿ ಮಾಡಲಾಗಿದೆ.

ಈತನೊಂದಿಗೆ ವಿರಾಜಪೆೇಟೆಗೆ ಆಗಮಿಸಿದ್ದ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮೂಲದವವಾದ ತಾರೀಫ್ ಶೇಖ್ ಕೂಡ ಇದ್ದ. ಪೊಲೀಸರಿಗೆ ಮಾಹಿತಿ ನೀಡದೆ ಸಹರುಲ್ ಇಸ್ಲಾಂ ಗೆ ಆಶ್ರಯ ನೀಡಿದ ಆರೋಪದ ಹಿನ್ನೆಲೆ ತಾರೀಫ್ ಶೇಖ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ವೀರಾಜಪೇಟೆ ಉಪ ವಿಭಾಗದ ಡಿವೈಎಸ್‌ಪಿ ನಾಗಪ್ಪ ಅವರ ನೇತೃತ್ವದಲ್ಲಿ ವೀರಾಜಪೇಟೆ ವೃತ್ತದ ಸಿಪಿಐ ಕುಮಾರಆರಾಧ್ಯ, ಪಿಎಸ್‌ಐ ಸಂತೋಷ್ ಕಶ್ಯಪ್, ಎಎಸ್‌ಐಗಳಾದ ಸುಬ್ರಮಣಿ, ಶಿವಪ್ಪ, ಸಿಬ್ಬಂದಿಗಳಾದ ಟಿ.ಎಂ.ಸಾಬು, ಹೆಚ್.ಸಿ. ಸುನಿಲ್, ಎನ್.ಕೆ.ಉಮೇಶ್, ಪಿ.ಪಿ.ಕಾವೇರಮ್ಮ, ರಜನ್, ಮಧು, ಮುನೀರ್, ಯೋಗೇಶ್ ಇವರುಗಳು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಾಹಿತಿ ನೀಡಿ: 
ಕೊಡಗು ಜಿಲ್ಲೆಯ ತೋಟಗಳಲ್ಲಿ, ಹೊಟೇಲ್, ಹೋಂ ಸ್ಟೇ, ರೆಸಾರ್ಟ್, ಕಟ್ಟಡ ಕಾಮಗಾರಿ ಅಥವಾ ಇತರೆಡೆಗಳಲ್ಲಿ ಬಾಂಗ್ಲಾದೇಶಿಗರು ಅಕ್ರಮವಾಗಿ ಬಂದು ನೆಲೆಸಿರುವ ಸಾಧ್ಯತೆಗಳಿದೆಯೆಂದು ತಿಳಿಸಿರುವ ಪೊಲೀಸ್ ವರಿಷ್ಟಾಧಿಕಾರಿ ರಾಜೇಂದ್ರ ಪ್ರಸಾದ್, ಈ ಬಗ್ಗೆ ಮಾಹಿತಿ ಲಭಿಸಿದಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಅಥವಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂ. 08272-228330ಗೆ ಮಾಹಿತಿ ನೀಡಬಹುದೆಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X