ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನ ಇತಿಹಾಸ ಪ್ರಸಿದ್ಧ ಕೊಟ್ಟೂರು ಗುರುಬಸವೇಶ್ವರ ಜಾತ್ರಾ ರಥೋತ್ಸವದ ವೇಳೆ ರಥ ಏಕಾಏಕಿ ಮಗುಚಿಬಿದ್ದ ಪರಿಣಾಮ ಹಲವು ಮಂದಿ ಭಕ್ತರು ರಥದ ಅಡಿಯಲ್ಲಿ ಸಿಲುಕಿದ ದುರ್ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.