Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಖ್ಯಮಂತ್ರಿ ಕಾರ್ಯಕ್ರಮಗಳಿಗೆ ರಕ್ಷಣೆ...

ಮುಖ್ಯಮಂತ್ರಿ ಕಾರ್ಯಕ್ರಮಗಳಿಗೆ ರಕ್ಷಣೆ ನೀಡುವುದು ಪೊಲೀಸರ ಕರ್ತವ್ಯ: ಡಿವೈಎಫ್ಐ

ವಾರ್ತಾಭಾರತಿವಾರ್ತಾಭಾರತಿ22 Feb 2017 10:09 PM IST
share
ಮುಖ್ಯಮಂತ್ರಿ ಕಾರ್ಯಕ್ರಮಗಳಿಗೆ ರಕ್ಷಣೆ ನೀಡುವುದು ಪೊಲೀಸರ ಕರ್ತವ್ಯ: ಡಿವೈಎಫ್ಐ

ಮಂಗಳೂರು, ಫೆ.22: ಸಿಪಿಎಂ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಫೆ.25ರಂದು ನಡೆಯುವ ಕರಾವಳಿ ಸೌಹಾರ್ದ ರ‍್ಯಾಲಿಗೆ ಪ್ರತಿಯಾಗಿ ಈಗಾಗಲೇ ಸಂಘಪರಿವಾರದವರು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಲವೆಡೆಗಳಲ್ಲಿ ಕಿಡಿಗೇಡಿತನದ ಕೃತ್ಯವನ್ನು ಎಸಗಲಾಗಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ಸೌಹಾರ್ದ ರ‍್ಯಾಲಿ ಪ್ರಚಾರಾರ್ಥವಾಗಿ ನಗರದ ಹೊರವಲಯದ ಶಕ್ತಿನಗರ, ಉರ್ವಸ್ಟೋರ್, ಕೊಂಚಾಡಿ, ಯೆಯ್ಯೋಡಿ ಮೊದಲಾದ ಕಡೆಗಳಲ್ಲಿ ಅಳವಡಿಸಲಾದ ಸುಮಾರು 25 ಬ್ಯಾನರ್‌ಗಳನ್ನು ಕೊಂಡೊಯ್ದಿದ್ದಾರೆ. ನಗರದೊಳಗಿನ 12 ಫೆಕ್ಸ್‌ಗಳು ಕಾಣೆಯಾಗಿವೆ. ಅಲ್ಲದೆ ಸಿಪಿಎಂ ಅಳವಡಿಸಲಾದ ಪೋಸ್ಟರ್‌ಗಳಿಗೆ ಹಾನಿಗೊಳಿಸಲಾಗಿದೆ ಎಂದರು.

ಸೌಹಾರ್ದ ರ‍್ಯಾಲಿಗೆ ಸಂಘಪರಿವಾರದವರು ತೊಂದರೆಗಳನ್ನು ನೀಡುತ್ತಿರುವ ಬಗ್ಗೆ ಸಿಪಿಎಂ ರಾಜ್ಯ ನಿಯೋಗವು ಮುಖ್ಯಮಂತ್ರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಅಲ್ಲದೆ, ಈ ಸಂಬಂಧ ಸಿಪಿಎಂ ರಾಜ್ಯ ನಿಯೋಗವು ಮಂಗಳವಾರ ಪೊಲೀಸ್ ಮಹಾನಿರ್ದೇಶರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದೆ. ಸಂಘಪರಿವಾರದವರು ನೀಡುತ್ತಿರುವ ತೊಂದರೆಯ ಬಗ್ಗೆ ಅವರಿಗೆ ಮನವರಿಕೆ ಮಾಡಲಾಗಿದೆ. ರ‍್ಯಾಲಿ ಹಾಗೂ ಸಮಾವೇಶಕ್ಕೆ ರಕ್ಷಣೆ ನೀಡಬೇಕಾದುದು ಪೊಲೀಸ್ ಇಲಾಖೆಯ ಕರ್ತವ್ಯವಾಗಿದೆ ಎಂದು ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

ರ‍್ಯಾಲಿ ಹಾಗೂ ಸಮಾವೇಶಕ್ಕೆ ಪಕ್ಷ, ಜಾತಿ, ಧರ್ಮ ಮರೆತು ಎಲ್ಲರೂ ಪಾಲ್ಗೊಳ್ಳುತ್ತಿದ್ದಾರೆ. ಈ ನಡುವೆ ಸಂಘಪರಿವಾರದವರು ಬಂದ್ ಕರೆ ನೀಡಿರುವುದು ಸರಿಯಲ್ಲ. ಅದನ್ನು ತಕ್ಷಣ ವಾಪಾಸು ಪಡೆಯಬೇಕೆಂದು ಕೇಳಿಕೊಳ್ಳುತ್ತಿದ್ದೇವೆ. ಮತ್ತು ಜಿಲ್ಲಾಡಳಿತ ಬಂದ್‌ಗೆ ಅವಕಾಶ ನೀಡಬಾರದು. ಒಂದು ವೇಳೆ ಬಂದ್ ಆಗಿದ್ದರೂ ಕಾಲ್ನಡಿಯಲ್ಲಾದರೂ ನೆಹರೂ ಮೈದಾನಕ್ಕೆ ಬಂದು ಸೇರುತ್ತೇವೆ ಎಂದರು.

ಅನ್ಯ ರಾಜ್ಯದ ಮುಖ್ಯಮಂತ್ರಿಯೊಬ್ಬರು ಜಿಲ್ಲೆಗೆ ಭೇಟಿ ನೀಡುವಾಗ ಅವರನ್ನು ತಡೆಯಲು ಪ್ರಯತ್ನಿಸುತ್ತಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾದುದು. ಮುಖ್ಯಮಂತ್ರಿಯೊಬ್ಬರ ಭೇಟಿಯನ್ನು ತಡೆಯಲು ಮುಂದಾಗುವುದು ಸಂವಿಧಾನದಮ ಮೇಲೆ ನಂಬಿಕೆ ಇಲ್ಲ ಎಂಬುದನ್ನು ತೋರಿಸುತ್ತದೆ. ಸಂವಿಧಾನದ ಮೇಲೆ ನಂಬಿಕೆ ಇಲ್ಲದವರ ಕೃತ್ಯವಾಗಿದೆ. ಆದ್ದರಿಂದ ಅನ್ಯ ರಾಜ್ಯದ ಮುಖ್ಯಮಂತ್ರಿಯೊಬ್ಬರು ಮಂಗಳೂರಿಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಅವರಿಗೆ ಸೂಕ್ತ ರಕ್ಷಣೆ ಒದಗಿಸುವುದು ಪೊಲೀಸ್ ಇಲಾಖೆಯ ಕರ್ತವ್ಯವಾಗಿದೆ ಎಂದು ಮುನೀರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X